ಬೆಂಗಳೂರು: ರಾಜ್ಯದ ಜಿಲ್ಲಾ, ತಾಲೂಕು, ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧ ಖರೀದಿಗಾಗಿ ರಾಜ್ಯ ಸರ್ಕಾರ ಹೆಚ್ಚುವರಿ 30 ಕೋಟಿ ರು. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಉಚಿತ ಔಷಧಿ ಯೋಜನೆ ಹಾಗೂ ಜನನಿ ಶಿಶು ಸುರಕ್ಷಾ ಕಾರ್ಯಕ್ರಮದಡಿ ಅನುದಾನ ಬಿಡುಗಡೆ ಆಗದಿರುವುದರಿಂದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳ ಹಿತದೃಷ್ಟಿಯಿಂದ ಅಗತ್ಯ ಔಷಧಗಳನ್ನು ಪೂರೈಸಲು ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಏನಿದೆ ಸರ್ಕಾರದ ಆದೇಶದಲ್ಲಿ?
ರಾಜ್ಯದ ಸರ್ಕಾರಿ ಆರೋಗ್ಯ ಸಂಸ್ಥೆಗಳಾದ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಇತರೆ ಆರೋಗ್ಯ ಸಂಸ್ಥೆಗಳಿಗೆ ಅಗತ್ಯ ಔಷಧಿಗಳ ಖರೀದಿಗಾಗಿ ಹೆಚ್ಚಿನ ಅನುದಾನವನ್ನು ನೀಡಲು ತೀರ್ಮಾನಿಸಲಾಗಿರುತ್ತದೆ.
ಉಚಿತ ಔಷಧಿ ಯೋಜನೆ (Free Drugs Scheme) ಹಾಗೂ ಜನನಿ ಶಿಶು ಸುರಕ್ಷಾ ಕಾರ್ಯಕ್ರಮ (JSSK) ಅಡಿಯಲ್ಲಿ ನೀಡಲಾಗುವ ಅನುದಾನಬಳಸಿಕೊಂಡು ಆಸ್ಪತ್ರೆಗಳಲ್ಲಿ ಸ್ಥಳೀಯವಾಗಿ ಔಷದಿಗಳನ್ನು ಖರೀದಿಸಲಾಗಿತಿದೆ. ಕೇಂದ್ರ ಸರ್ಕಾರದ ಯೋಜನೆಯಾದ NHM ವತಿಯಿಂದ ಈ ಅನುದಾನ ಬಿಡುಗಡೆಯಾಗದೆ ಇರುವುದರಿಂದ ಉಲೇಖ (1)ರಪಸ್ತಾವನೆಯಲ್ಲಿ ರಾಜ್ಯವಲಯದ ಜಿಲ್ಲಾ/ತಾಲ್ಲೂಕು/ಸಮುದಾಯ ಆರೋಗ್ಯ ಕೇಂದ್ರಗಳು /ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳ ಹಿತದೃಷ್ಟಿಯಿಂದ ಅಗತ್ಯ ಔಷಧಗಳನ್ನು ಪೂರೈಸಲು ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಕೋರಲಾಗಿದೆ. ಇದರಿಂದ ಆರೋಗ್ಯ ಸಂಸ್ಥೆಗಳಲ್ಲಿನ ನಗದು ವರ್ಗಾವಣೆ ಸ್ಥಿತಿಯನ್ನು ಸುಧಾರಿಸಲು ಹಾಗೂ ಮುಂದಿನ ಎರಡು ತಿಂಗಳ ಅವಧಿಗೆ ಅಂದರೆ, ಮಾರ್ಚ್ ಅಂತ್ಯಕ್ಕೆ KSMSCL ವತಿಯಿಂದ ಅಗತ್ಯ ಔಷಧಗಳನ್ನು ಪೂರೈಸಲಾಗುವವರೆಗೆ ಈ ಬೇಡಿಕೆಯನ್ನು ಸಲ್ಲಿಸಲಾಗಿರುತ್ತದೆ.
ಮೇಲ್ಕಂಡ ಪರಿಸ್ಥಿತಿಯನ್ನು ಪರಿಗಣಿಸಿ, ಹಣಕಾಸು ಇಲಾಖೆ ತಮ್ಮ ಉಲ್ಲೇಖಿತ ಅನುಮೋದನೆ ಸಂಖ್ಯೆ FD 105 EXP-5/2026 ದಿನಾಂಕ 10.02.2026 ಮೂಲಕ ರಾಜ್ಯ ಸರ್ಕಾರದ ವತಿಯಿಂದ ಬಿಡುಗಡೆಯಾಗಿರುವ KSMSCL ಬ್ಯಾಂಕ್ ಖಾತೆಯಲ್ಲಿ ಲಭ್ಯವಿರುವ *3,000 ಲಕ್ಷ (ಮೂರು ಸಾವಿರ ಲಕ್ಷ ರೂಪಾಯಿ ಮಾತ್ರ) ಹಣವನ್ನು ತಾತ್ಕಾಲಿಕವಾಗಿ ಎರಡು ತಿಂಗಳ ಅವಧಿಗೆ ಸ್ಥಳೀಯ ಔಷಧಿ ಖರೀದಿಗೆ ಬಳಸಲು ಅನುಮತಿ ನೀಡಿರುತ್ತದೆ.
ಬೆಂಗಳೂರು, ದಿನಾಂಕ:18.02.2026 ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರವು ಕೆಳಕಂಡಂತೆ ಆದೇಶಿಸುತ್ತದೆ:
1. KSMSCL ಬ್ಯಾಂಕ್ ಖಾತೆಯಲ್ಲಿ ಲಭ್ಯವಿರುವ 13,000 ಲಕ್ಷ (ಮೂರು ಸಾವಿರ ಲಕ್ಷ ರೂಪಾಯಿ ಮಾತ್ರ) ಹಣವನ್ನು ತಾತ್ಕಾಲಿಕವಾಗಿ ಎರಡು ತಿಂಗಳ ಅವಧಿಗೆ ಅಗತ್ಯ ಔಷಧಿಗಳ ಸ್ಥಳೀಯ ಖರೀದಿಗಾಗಿ ಬಳಸಲು ಅನುಮತಿ ನೀಡಲಾಗಿದೆ.









