ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಾಧ್ಯಂತ ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಿ ಆದೇಶಿಸಿದೆ.
ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹಿಂದುಳಿದ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಶಾಸಕರುಗಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಿರೋದಾಗಿ ತಿಳಿಸಿದ್ದಾರೆ.
ಬಸವರಾಜ ರಾಯರೆಡ್ಡಿ ಅವರ ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ 13 ಕೋಟಿ, ಅಲ್ಲಮಪ್ರಭು ಪಾಟೀಲ್ ಅವರ ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 5 ಕೋಟಿ, ಡಿ.ಸುಧಾಕರ್ ಹಿರಿಯೂರು ಕ್ಷೇತ್ರಕ್ಕೆ 1 ಕೋಟಿ, ಹಂಪನಗೌಡ ಬಾದರ್ಲಿಯ ಸಿಂಧನೂರು ಕ್ಷೇತ್ರಕ್ಕೆ 5 ಕೋಟಿ, ಹೆಚ್.ಕೆ ಪಾಟೀಲ್ ಅವರ ಗದಗ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಸೇರಿದಂತೆ ವಿವಿಧ ಶಾಸಕರು, ಸಚಿವರ ಕ್ಷೇತ್ರಗಳಿಗೆ ಸಮುಧಾಯ ಭವನ ನಿರ್ಮಿಸೋದಕ್ಕೆ ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ.