Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲು ರಾಜ್ಯ ಸರ್ಕಾರವು ಕೃಷಿ ಕಲ್ಪ ಫೌಂಡೇಷನ್‌ ಜೊತೆಗೆ ತಿಳಿವಳಿಕೆ ಒಪ್ಪಂದ (ಎಂಒಯು) ಪತ್ರಕ್ಕೆ ಸಹಿ ಹಾಕಿದೆ.

ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ಮೂಲಕ ಈ ಒಪ್ಪಂದಕ್ಕೆ ಸಹಿ ಹಾಕಿದೆ.

ರಾಜ್ಯ ಸರ್ಕಾರದ ಪರವಾಗಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಮತ್ತು ಈ ಉಪಕ್ರಮದ ಅನುಷ್ಠಾನ ಪಾಲುದಾರಿಕೆ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿರುವ ಕೃಷಿ ಕಲ್ಪ ಫೌಂಡೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಂ. ಪಾಟೀಲ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದರು.

ಬೆಂಗಳೂರಿನ ಕೆಐಟಿಎಸ್ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಮ್ಮುಖದಲ್ಲಿ ಈ ʼ ಎಂಒಯುʼಗೆ ಸಹಿ ಹಾಕಲಾಯಿತು.

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್., ʼಕೆಐಟಿಎಸ್‌ʼನ ಜನರಲ್ ಮ್ಯಾನೇಜರ್ ಅಪೂರ್ವಾ, ಕೃಷಿ ಕಲ್ಪ ಪ್ರತಿಷ್ಠಾನದ ಗ್ರಾಮೀಣ ಉದ್ಯಮಶೀಲತೆಯ ಉಪಾಧ್ಯಕ್ಷ ಈರಣ್ಣ, ಕೃಷಿ ಕಲ್ಪ ಪ್ರತಿಷ್ಠಾನದ ಯುವ ಉದ್ಯಮಶೀಲತೆಯ ಮುಖ್ಯಸ್ಥ ಅಭಿನಂದನ್, ಕೆಐಟಿಎಸ್ ಮತ್ತು ಕೃಷಿ ಕಲ್ಪ ಪ್ರತಿಷ್ಠಾನದ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, “ಕಲ್ಯಾಣ ಕರ್ನಾಟಕವು ಕೃಷಿ ಮತ್ತು ಗ್ರಾಮೀಣ ಉದ್ಯಮದಲ್ಲಿ ನಾವೀನ್ಯತೆ ಕೇಂದ್ರವಾಗಿ ಹೊರಹೊಮ್ಮಲು ಅಪಾರ ಸಾಮರ್ಥ್ಯ ಹೊಂದಿದೆ. ಸ್ಥಳೀಯ ಆರ್ಥಿಕತೆಯ ವೇಗವರ್ಧಕ ಕಾರ್ಯಕ್ರಮದಡಿ (ಎಲ್‌ಇಎಪಿ- ಲೀಪ್‌) , ಕರ್ನಾಟಕ ಸರ್ಕಾರವು ಬೆಂಗಳೂರಿನಾಚೆಗೆ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಉದ್ಯಮ ಅವಕಾಶಗಳನ್ನು ಸ್ಥಳೀಯ ಸಮುದಾಯಗಳಿಗೆ ಹತ್ತಿರ ತರಲು ಬದ್ಧವಾಗಿದೆ. ಕಲಬುರಗಿಯಲ್ಲಿ ಸ್ಥಾಪನೆಗೊಳ್ಳಲಿರುವ ಶ್ರೇಷ್ಠತಾ ಕೇಂದ್ರವು ರೈತರು, ನವೋದ್ಯಮಗಳು, ಸಂಶೋಧಕರು ಮತ್ತು ಯುವ ನಾವೀನ್ಯಕಾರರು ಅತ್ಯಾಧುನಿಕ ಕೃಷಿ-ತಂತ್ರಜ್ಞಾನ ಪರಿಹಾರಗಳ ಜೊತೆ ಕಾರ್ಯನಿರ್ವಹಿಸಲು, ಜೀವನೋಪಾಯ ಬಲಪಡಿಸಿಕೊಳ್ಳಲು ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಸದೃಢ ವೇದಿಕೆಯನ್ನು ನಿರ್ಮಾಣ ಮಾಡಲಿದೆ’ ಎಂದು ಹೇಳಿದ್ದಾರೆ.

ಒಪ್ಪಂದದ ಮುಖ್ಯಾಂಶಗಳು

• ಕೃಷಿ ಮತ್ತು ಸಂಬಂಧಿತ ವಲಯಗಳಿಗೆ ಗ್ರಾಮೀಣ ನಾವೀನ್ಯತೆ ಮತ್ತು ತಂತ್ರಜ್ಞಾನ-ನೇತೃತ್ವದ ಪರಿಹಾರಗಳ ಮೇಲೆ ಗಮನ ಕೇಂದ್ರೀಕರಿಸಿದ ಕೃಷಿ ಮತ್ತು ಸಂಬಂಧಿತ ನಾವೀನ್ಯತೆಯ ಶ್ರೇಷ್ಠತಾ ಕೇಂದ್ರದ ಸ್ಥಾಪನೆ.

• ಬೆಂಗಳೂರಿನ ಆಚೆಗೆ ಪ್ರಾದೇಶಿಕ ನಾವೀನ್ಯತೆ ವ್ಯವಸ್ಥೆ ಬಲಪಡಿಸಲು ಐದು ವರ್ಷಗಳಲ್ಲಿ ₹ 1,000 ಕೋಟಿ ವೆಚ್ಚದ ʼಲೀಪ್ʼ ಕಾರ್ಯಕ್ರಮದ ಅಡಿಯಲ್ಲಿ ಅನುಷ್ಠಾನ.

• ಐದು ವರ್ಷಗಳಲ್ಲಿ ₹ 90 ಕೋಟಿ ವೆಚ್ಚದಲ್ಲಿ ರಾಜ್ಯದಾದ್ಯಂತ ಆರು ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವ ವಿಶಾಲ ಉಪಕ್ರಮದ ಭಾಗ

• ಕೃಷಿ ಕಲ್ಪ ಫೌಂಡೇಷನ್ ಅನುಷ್ಠಾನ ಪಾಲುದಾರರಾಗಿ ಕಾರ್ಯನಿರ್ವಹಣೆ. ಶ್ರೇಷ್ಠತಾ ಕೇಂದ್ರದಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕಾರ್ಯಕ್ರಮಗಳನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿದೆ.

• ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ಐದು ವರ್ಷಗಳ ಅವಧಿಯಲ್ಲಿ ₹16.5 ಕೋಟಿ ನೆರವಿನ ಮೂಲಕ ಈ ಉಪಕ್ರಮವನ್ನು ಬೆಂಬಲಿಸಲಿದೆ.

• ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್‌ಡಿಬಿ) ಮೂಲ ಸೌಕರ್ಯ ಅಭಿವೃದ್ಧಿಯ ₹4.5 ಕೋಟಿ ನೆರವು ಸೇರಿದೆ.

• ಅತ್ಯಾಧುನಿಕ ನಾವೀನ್ಯತಾ ಮೂಲಸೌಕರ್ಯಗಳ ಅಭಿವೃದ್ಧಿಯಡಿ

o ಅತ್ಯಾಧುನಿಕ ಕೃಷಿ ನಾವೀನ್ಯತೆ ಪ್ರಯೋಗಾಲಯಗಳು
o 3ಡಿ ಮುದ್ರಣ ಮತ್ತು ಮೂಲಮಾದರಿ ಸೌಲಭ್ಯಗಳು
o ತಯಾರಕರ ಪ್ರಯೋಗಾಲಯ
o ಮಾಧ್ಯಮ ಮತ್ತು ವಿಷಯ ಪ್ರಯೋಗಾಲಯ

• ಕೃಷಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (ಎಐ) ನೆರವಿನ ಕೃಷಿ, ಕೃಷಿಗಾಗಿ ಐಒಟಿ, ರೋಬೊಟಿಕ್ಸ್, ಡಿಜಿಟಲ್ ಕೃಷಿ ವೇದಿಕೆಗಳು ಮತ್ತು ದತ್ತಾಂಶ-ಆಧಾರಿತ ಕೃಷಿ ತಂತ್ರಜ್ಞಾನಗಳು ಸೇರಿದಂತೆ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಗಮನ ಕೇಂದ್ರೀಕರಣ

• ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಂತ್ರಜ್ಞಾನ ಅಳವಡಿಕೆ ಮತ್ತು ಉದ್ಯಮ ಅಭಿವೃದ್ಧಿ ಕಾರ್ಯಗತಗೊಳಿಸುವ ನವೋದ್ಯಮಗಳು, ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ), ಸ್ವ-ಸಹಾಯ ಗುಂಪುಗಳು (ಎಸ್‌ಎಚ್‌ಜಿ) ಮತ್ತು ಗ್ರಾಮೀಣ ನಾವೀನ್ಯಕಾರರಿಗೆ ಬೆಂಬಲ.

• ಮಾರ್ಗದರ್ಶನ ಮತ್ತು ಅನುಷ್ಠಾನದ ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ಮತ್ತು ಮೇಲ್ವಿಚಾರಣಾ ಸಮಿತಿಯ ರಚನೆ

• ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಉತ್ಪನ್ನ ಸ್ಟಾರ್ಟ್‌ಅಪ್‌ಗಳು, ನಾವೀನ್ಯಕಾರರು ಮತ್ತು ಗ್ರಾಮೀಣ ಉದ್ಯಮಿಗಳಿಗೆ ಈ ಶ್ರೇಷ್ಠತಾ ಕೇಂದ್ರವು ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿದೆ.

• ಕೃಷಿ ಮೌಲ್ಯ ಸರಪಳಿಯಾದ್ಯಂತ ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ನೆರವಾಗಲಿದೆ.

• ಕೃಷಿ ಕಲ್ಪ ಪ್ರತಿಷ್ಠಾನವು ಈ ಕೇಂದ್ರವನ್ನು ಕಾರ್ಯಗತಗೊಳಿಸಲಿದೆ

ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ವಿದ್ಯುತ್ ಗುತ್ತಿಗೆದಾರ’ರ ಬೃಹತ್ ಪ್ರತಿಭಟನೆ

Share. Facebook Twitter LinkedIn WhatsApp Email

Related Posts

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

1 Min Read
Recent News

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

​ಬಿಸಿಲಿನ ಬೇಗೆಯಿಂದ ಬಚಾವಾಗಲು ಐಪಿಎಲ್ ಮುಂಚಿತವಾಗಿಯೇ ಆರಂಭ? 2027ರ ಟೂರ್ನಿಯಲ್ಲಿ ಹೊಸ ತಂಡಗಳ ಸೇರ್ಪಡೆ ಸದ್ಯಕ್ಕಿಲ್ಲ!

State News
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.