ಬೆಂಗಳೂರು: ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಆಣೆಕಟ್ಟುಗಳು ಭರ್ತಿಯಾಗಿದ್ದು, ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಲು ನಿರ್ಧರಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಪಿಎಂಕೆಎಸ್ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಕೆರೆಗಳನ್ನು ಏತ ನೀರಾವರಿ ಯೋಜನೆಗಳ ಮೂಲಕ ತುಂಬಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಕೇಂದ್ರ ಜಲ ಆಯೋಗದ ನಿರ್ದೇಶಕರು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ ಸಭೆ ಮುಖ್ಯಾಂಶಗಳು
ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಬೆಂಗಳೂರಿನ ವಿಕಾಸಸೌಧದಲ್ಲಿ ಪಿಎಂಕೆಎಸ್ ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಪಿಎಂಕೆಎಸ್ವೈ ಯೋಜನೆ ಅಡಿಯಲ್ಲಿ ಈಗಾಗಲೇ ಮಂಜೂರಾಗಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಸಮಗ್ರ ಮಾಹಿತಿ ಪಡೆಯಲಾಯಿತು.
ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗದ ನಿರ್ದೇಶಕರು, ಅದಕ್ಕೆ ಬೇಕಾದಂತಹ ಅಗತ್ಯ ಕ್ರಿಯಾಯೋಜನೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಬಹತೇಕ ಅಣೆಕಟ್ಟುಗಳು ತುಂಬಿವೆ. ಕೆಲವು ಕೆರೆಗಳಲ್ಲಿ ಹೆಚ್ಚಿನ ನೀರಿನ ಸಂಗ್ರಹವಾಗದೇ ಇರುವ ಬಗ್ಗೆ ಅಧಿಕಾರಿಗಳು ವರದಿಯನ್ನು ನೀಡಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದಕೆರೆ ತುಂಬಿಸುವ ಕಾರ್ಯವನ್ನ ಮರುಚಾಲನೆಗೊಳಿಸಬೇಕು.
ಎಲ್ಲಾ ಕೆರೆಗಳು ತುಂಬುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಲ್ಲದೇ, ಅವುಗಳ ಸಮರ್ಪಕ ನಿರ್ವಹಣೆಗೂ ಆದ್ಯತೆ ನೀಡಬೇಕು.
ವಲಯವಾರು ಕೈಗೊಂಡಿರುವ ಏತ ನೀರಾವರಿ ಯೋಜನೆಗಳ ಬಗ್ಗೆ, ಈಗ ಚಾಲ್ತಿಯಲ್ಲಿರುವ, ಸರಿಯಾದ ನಿರ್ವಹಣೆ ಆಗುತ್ತಿರುವ ಹಾಗೂ ನಿಷ್ಕ್ರಿಯಗೊಂಡಿರುವ ಯೋಜನೆಗಳ ಬಗ್ಗೆ ವರದಿ ನೀಡಬೇಕು. ಇವುಗಳನ್ನು ಪುನರುಜ್ಜಿವನಗೊಳಿಸಿದರೆ ಆಗುವ ಅನುಕೂಲಗಳು ಹಾಗೂ ಅದಕ್ಕೆ ತಗಲುವ ವೆಚ್ಚದ ಬಗ್ಗೆಯು ಮಾಹಿತಿಯನ್ನು ಅದರಲ್ಲಿ ಅಳವಡಿಸಬೇಕು ಎಂದು ತಿಳಿಸಲಾಯಿತು.
ವಿಭಾಗವಾರು ಹಾಗೂ ಉಪವಿಭಾಗವಾರು ಕಚೇರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಜಾಗದ ಕೊರತೆಯಿದ್ದಲ್ಲಿ ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸರಕಾರದ ಗಮನಕ್ಕೆ ತರಬೇಕು.