ಹೊಸಪೇಟೆ: ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ದೊಡ್ಡ ರಾಜ್ಯ ಆಗಿದೆ. ವರ್ಷಕ್ಕೆ 4 ಲಕ್ಷ ಕೋಟಿ ತೆರಿಗೆಯನ್ನು ಕನ್ನಡಿಗರು ಕಟ್ಟುತ್ತಾರೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 50 ಸಾವಿರ ಕೋಟಿ. 15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಫೆ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಕರ್ನಾಟಕ ಮತ್ತು ಕನ್ನಡಿಗರ ಹಕ್ಕನ್ನು ಕೇಳಲು, ನಮ್ಮ ಪಾಲನ್ನು ನಮಗೆ ಕೊಡಿ ಎಂದು ಕೇಳಲು ನಡೆಸುತ್ತಿರುವ ಪ್ರತಿಭಟನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ , ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಜೀವ ವಿಮೆ, 2 ಲಕ್ಷದವರೆಗೂ ‘ಅಪಘಾತ ವಿಮೆ’ ಜಾರಿ
‘ಸಬ್ ರಿಜಿಸ್ಟಾರ್ ಕಚೇರಿ’ ಒಳಗೆ ಸಾರ್ವಜನಿಕರ ‘ಲ್ಯಾಪ್ ಟಾಪ್, ಟ್ಯಾಬ್’ ಬಳಕೆಗೆ ನಿಷೇಧ – ರಾಜ್ಯ ಸರ್ಕಾರ ಆದೇಶ