ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಕುರಿತು..
1. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ 2023-24 ಹಾಗೂ 2024 25ನೇ ಸಾಲಿನ ವಾರ್ಷಿಕ ಯೋಜನಾ ಮಂಡಳಿ ಅನುಮೋದನೆಯ 3:17-04-2023 3 15-04-2024.
2. ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರ ಏಕ ಕಡತ ಸಂಖ್ಯೆ: SSK/Prpy/PAB/4/2024-JDQ.
ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಮೇಲೆ ಓದಲಾದ ಕ್ರಮಾಂಕ (1)ರ ನಡವಳಿಯನ್ವಯ ಅನುಮೋದನೆ ನೀಡಲಾಗಿರುತ್ತದೆ.
ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರು ಮೇಲೆ ಓದಲಾದ ಕ್ರಮಾಂಕ (2)ರ ಏಕ ಕಡತದಲ್ಲಿ ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿರುತ್ತಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಅನುಬಂಧಗಳಲ್ಲಿರುವಂತೆ 2024-25ನೇ ಸಾಲಿನಿಂದ ಕ್ರಮವಾಗಿ ರಾಜ್ಯದ 262 ಮತ್ತು 316 ಒಟ್ಟು 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಿದೆ.
ಮುಂದುವರೆದು, ಶಿಕ್ಷಣ ಮಂತ್ರಾಲಯದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು-
1. 2024-25ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳತಕ್ಕದ್ದು,
2. 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪುಚಾರವನ್ನು ಮಾಡತಕ್ಕದ್ದು.
3. 2024-25ನೇ ಸಾಲಿನ ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4 ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸತಕದ್ದು.
4. ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳಿಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು, ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸತಕ್ಕದ್ದು.
5. ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ_ಶಿಕ್ಷಕಿ/ಶಿಕ್ಷಕರಿಗೆ ಪುಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ ರೂ. 10,000.00 ಮತ್ತು ಆಯಾ ಇವರಿಗೆ ಮಾಸಿಕ ರೂ. 5000.00 ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.
6. ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಿಂದ ಬಿಡುಗಡೆ ಮಾಡತಕ್ಕದ್ದು.
ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾರವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.
ಆಡಳಿತಾತ್ಮಕ ಕ್ರಮಗಳು:
1. ಶಿಕ್ಷಕರು: ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ 50% ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೋಮಾ ಇನ್ ನರ್ಸರಿ ಟೀಚರ್ಸ್ ಎಜುಕೇಶನ್/ಪ್ರೀ- ಸ್ಕೂಲ್ ಎಜುಕೇಶನ್/ಅರ್ಲಿ ಚೈಲುಡ್ ಎಜ್ಯುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ [Diploma in Nursery Teachers Education/pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರತಕ್ಕದ್ದು.
2. ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆಯುವುದರ ಜೊತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.
3.ಆಯಾಗಳ ಹುದ್ದೆಗೆ ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು,
4. ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು:-
a)ಶಿಕ್ಷಕರ/ಆಯಾರ ಆಯ್ಕೆ ಸಮಿತಿ:- ಕ್ಷೇತ್ರಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ | ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
b)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ಈ ಕೆಳಗಿನ ಅಂಶಗಳಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸತಕ್ಕದ್ದು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಕೇಂದ್ರ ಸಚಿವ ‘ಹೆಚ್.ಡಿ ಕುಮಾರಸ್ವಾಮಿ’ಗೆ ನಿಂದಿಸಿದ ‘ನಟ ದರ್ಶನ ಮಹಿಳಾ ಅಭಿಮಾನಿ’ ವಿರುದ್ಧ ದೂರು
ಗಮನಿಸಿ : ʻರೇಷನ್ ಕಾರ್ಡ್ʼ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!