ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ ಗಳ ದರವನ್ನು ಮರು ನಿಗದಿಪಡಿಸಿ, ಸರ್ಕಾರ ಆದೇಶಿಸಿದೆ. ಈ ಮೂಲಕ ಖಾಸಗಿ ಲ್ಯಾಬ್, ಆಸ್ಪತ್ರೆಗಳ ದುಬಾರಿ ದರಕ್ಕೆ ಬ್ರೇಕ್ ಹಾಕಲಾಗಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್‌ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗಶಾಲೆಗಳ ಡಯಾಗೋಸ್ಟಿಕ್ ಲ್ಯಾಬೋರೇಟರಿಗಳು ಡಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇಲೆ ಓದಲಾದ ಕ್ರಮಾಂಕ (2)ರನ್ವಯ, ಡೆಂಗಿ ಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು (Screening test) ಪರಿಷ್ಕರಿಸಲು ಉದ್ದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಟೆಸ್ಟಿಂಗ್ ಲ್ಯಾಬ್‌ಗಳಿಗೆ ಡೆಂಗಿಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದ್ದಾರೆ.

ಹೀಗಿದೆ ಡೆಂಗ್ಯೂ ಪತ್ತೆ ಪರೀಕ್ಷೆಯ ಪರಿಷ್ಕೃತ ದರಗಳು
1. Dengue ELISA NS1 -ರೂ.300
2. Dengue ELISA IgM – ರೂ.300
3. Screening test Rapid card test for NS1, IgM & IgM – ಒಟ್ಟು ಸೇರಿ ರೂ.250.

ಸದರಿ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020, ಸೆಕ್ಷನ್ 4 (1) & 4(2) k ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿರುತ್ತದೆ.

ರಾಜ್ಯದ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗಶಾಲೆಗಳು/ ಡಯಾಗೋಸ್ಟಿಕ್ ಲ್ಯಾಬೊರೇಟರಿಗಳು ಈ ಮೇಲೆ ತಿಳಿಸಿದ ಡೆಂಗಿಜ್ವರ ಪತ್ತೆ ಪರೀಕ್ಷೆಯ ಪರಿಷ್ಕತ ದರಗಳನ್ನು ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಸೂಚಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

Share.
Exit mobile version