ದಕ್ಷಿಣ ಕನ್ನಡ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದಂತ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಖಂಡಿಸಿ, ಪ್ರತಿಭಟನೆ ನಡೆಸಿದ್ದ ವೇಳೆಯಲ್ಲಿ, ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗೆ ಲಾಠಿ ಚಾರ್ಜ್ ನಡೆಸಿದ್ದರಿಂದ ಪೊಲೀಸರ ಕ್ರಮಕ್ಕೆ, ಕಾರ್ಯಕರ್ತರು ಕಿಡಿಕಾರಿದ್ದರು. ಜೊತೆಗೆ ಸಿಎಂ ಬೊಮ್ಮಾಯಿ ವಿರುದ್ಧವೂ ಘೋಷಣೆ ಕೂಗಿದ್ದರು. ಅಲ್ಲದೇ ಲಾಠಿ ಚಾರ್ಜ್ ಗೆ ಕಾರಣವಾದಂತ ಅಧಿಕಾರಿಗಳನ್ನು ವರ್ಗಾವಣೆಗೂ ಒತ್ತಾಯಿಸಿದ್ದರು. ಹೀಗಾಗಿ ಬಿಜೆಪಿ ಕಾರ್ಯಕರ್ತರ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದು, ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

BIG BREAKING NEWS: ಪ್ರವೀಣ್ ಹತ್ಯೆ ಪ್ರಕರಣ NIA ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ನಡೆಸಲಾಗುತ್ತಿದ್ದಂತ ಪ್ರತಿಭಟನಾ ಮೆರವಣಿಗೆಕಾರರ ಮೇಲೆ ಪೊಲೀಸರು ಕಳೆದ ಎರಡು ದಿನಗಳ ಹಿಂದೆ ಲಾಠಿ ಚಾರ್ಜ್ ನಡೆಸಿದ್ದರು. ಅಲ್ಲದೇ ಕಾಸರಗೂಡಿನ ಹಿರಿಯ ಆರ್ ಎಸ್ ಎಸ್ ಕಾರ್ಯಕರ್ತ ರಮೇಶ್ ಮೇಲೂ ಪೊಲೀಸರು ಲಾಠಿ ಬೀಸಿದ್ದರು. ಹೀಗಾಗಿ ಪೊಲೀಸರ ಈ ಕ್ರಮಕ್ಕೆ ಹಲವು ಬಿಜೆಪಿ ಮುಖಂಡರು ಕಿಡಿಕಾರಿದ್ದರು. ಜೊತೆಗೆ ಸಿಎಂ ಬೊಮ್ಮಾಯಿ ವಿರುದ್ಧವು ಘೋಷಣೆ ಕೂಗಿ, ಲಾಠಿಚಾರ್ಜ್ ಗೆ ಕಾರಣವಾದಂತ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಲಾಗಿತ್ತು.

BIGG NEWS : ಬೆಳ್ಳಾರೆಗೆ ನೂತನ ಪಿಎಸ್‌ಐ ಆಗಿ ಸುಹಾಸ್‌, ಸುಬ್ರಹ್ಮಣ್ಯಕ್ಕೆ ಮಂಜುನಾಥ್‌ ನೇಮಕ

ಈ ಹಿನ್ನಲೆಯಲ್ಲಿ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಗೆ ಕಾರಣವಾದಂತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆ ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.

Breaking news:‌ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು, ಹಲವರ ರಕ್ಷಣೆ

ಬೆಳ್ಳಾರೆ ಠಾಣೆಯ ನೂತನ ಪಿಎಸ್ಐ ಸುಹಾಸ್ ಹಾಗೂ ಸುಬ್ರಹ್ಣಣ್ಯ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಮಂಜುನಾಥ್ ಟಿ ನೇಮಿಸಲಾಗಿದೆ. ಇದಲ್ಲದೇ ವರ್ಗಾವಣೆಯಾದ ಪಿಎಸ್ಐಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆಯನ್ನು ನೀಡಲಾಗಿದೆ.

Share.
Exit mobile version