ಬೆಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮರೆದಂತ ಬೆಂಗಳೂರಿನ ಕೆ ಆರ್ ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿನಿ ರಾಧಾ ವಿ ಅವರನ್ನು, ಕರ್ನಾಟಕ ಸರ್ಕಾರದಿಂದ ಕೊಡಮಾಡುವ ಅತ್ಯುನ್ನತ ಗೌರವ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರವು ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಕುಮಾರಿ ರಾಧ ವಿ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.
ಕರ್ನಾಟಕದಲ್ಲಿ 21 ದಿನ ‘ಭಾರತ್ ಜೋಡೋ ಯಾತ್ರೆ’ ಸಾಗಲಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿರುವಂತ ರಾಧ ವಿ ಅವರಿಗೆ ಅಭಿನಂದನೆಗಳು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಷ್ಠಿತ ಸಮಾರಂಭದಲ್ಲಿ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದೆ.
ಕ್ರೀಡಾ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮೆರೆದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ನೀಡುವ ಅತ್ಯುನ್ನತ ಗೌರವ – ಏಕಲವ್ಯ ಪ್ರಶಸ್ತಿಗೆ ಬೆಂಗಳೂರಿನ ಕೆ. ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ. ಎ ವಿದ್ಯಾರ್ಥಿನಿ ಕುಮಾರಿ ರಾಧಾ ಆಯ್ಕೆಯಾಗಿದ್ದಾರೆ. pic.twitter.com/SxtS6Glmlf
— Department of Collegiate Education (@DCE_Karnataka) August 27, 2022