ಬೆಂಗಳೂರು: ಕ್ರೀಡಾ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮರೆದಂತ ಬೆಂಗಳೂರಿನ ಕೆ ಆರ್ ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿನಿ ರಾಧಾ ವಿ ಅವರನ್ನು, ಕರ್ನಾಟಕ ಸರ್ಕಾರದಿಂದ ಕೊಡಮಾಡುವ ಅತ್ಯುನ್ನತ ಗೌರವ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗ್ರಿಡ್ ಸಂಪರ್ಕಿತ RE ಯೋಜನೆಗಳಿಂದ ‘ವಿದ್ಯುತ್ ಖರೀದಿಸಲು ಬಿಡ್ಡಿಂಗ್’ಗೆ ಹೊಸ ಮಾನದಂಡಗಳನ್ನು ಹೊರಡಿಸಿದ ಕೇಂದ್ರ | RE power projects

ಈ ಕುರಿತಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರವು ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಕುಮಾರಿ ರಾಧ ವಿ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಕರ್ನಾಟಕದಲ್ಲಿ 21 ದಿನ ‘ಭಾರತ್ ಜೋಡೋ ಯಾತ್ರೆ’ ಸಾಗಲಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿರುವಂತ ರಾಧ ವಿ ಅವರಿಗೆ ಅಭಿನಂದನೆಗಳು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಷ್ಠಿತ ಸಮಾರಂಭದಲ್ಲಿ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದೆ.

Share.
Exit mobile version