ಬೆಂಗಳೂರು: ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆಗೆ ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-01-2024 ರಿಂದ ದಿನಾಂಕ:28-02-2024 ರವರೆಗೆ ಮುಂದುವರೆಸಲಾಗಿತ್ತು ಎಂದಿದ್ದಾರೆ.
ಯಶಸ್ವಿನಿ ಯೋಜನೆಯು ಒಂದು ಜನಪ್ರಿಯ ಯೋಜನೆಯಾಗಿದ್ದು, ಈ ಯೋಜನೆಯು ಹೆಚ್ಚಿನ ಸಂಖ್ಯೆಯ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿ:31-03-2024 ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
ಆದುದರಿಂದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:29-02-2024 ರಿಂದ ದಿನಾಂಕ:31-03-2024 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಪಿಎಂ ‘ಜೀವನ್ ಜ್ಯೋತಿ ಬಿಮಾ ಯೋಜನೆ’ ಪ್ರಯೋಜನಗಳೇನು.? ಅರ್ಹತೆಯೇನು.? ಇಲ್ಲಿದೆ, ಮಾಹಿತಿ