ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಅವಧಿಗೆ ಗಳಿಕ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ಸರ್ಕಾರಿ ಅವಕಾಶವನ್ನು
ನಗದೀಕರಣ ಪಡೆಯುವ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ ಎಂದಿದ್ದಾರೆ.
2025 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸಂಸ್ಥೆಗಳ/ಉದ್ಯಮಗಳ ಎಲ್ಲಾ ಸ್ಥಿತಿಗತಿಗಳಿಗೊಳಪಟ್ಟು ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಸೌಲಭ್ಯವು ದಿನಾಂಕ:1/1/2025 ರಿಂದ 31/12/2025 ರ ವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ ಎಂದಿದ್ದಾರೆ.
ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2025 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದಿದ್ದಾರೆ.
ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರ ಷರತ್ತುಗಳು ಅನ್ವಯವಾಗುತ್ತವೆ ಎಂಬುದಾಗಿ ತಿಳಿಸಿದ್ದಾರೆ.
ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಮರು ವೇಳಾಪಟ್ಟಿ ನಿಗದಿ
BIG NEWS: ಸಾಗರದ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ‘DYSP’ಗೆ ದೂರು