ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರತಿಲೀಟರ್ ಗೆ ಹೆಚ್ಚಾಗಲಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯಲ್ಲಿ ಆದೇಶ ಹೊರಡಿಸಿದ್ದು, ಅದರಲ್ಲಿ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆ ಮಾಡಲಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಲಿದೆ ಎಂಬುದಾಗಿ ತಿಳಿಸಿದೆ.
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕರ್ನಾಟಕದಲ್ಲಿ ಹೆಚ್ಚಳ ಮಾಡಿದ ಪರಿಣಾಮವಾಗಿ ಪೆಟ್ರೋಲ್ ದರ ರೂ.3 ಹಾಗೂ ಡಿಸೇಲ್ ದರ ರೂ.3.50 ಪೈಸೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ಅನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ನೀಡಿದೆ.
BREAKING: ರಾಜ್ಯ ಸರ್ಕಾರದಿಂದ ‘ಆರೋಗ್ಯ ಇಲಾಖೆ ನೌಕರ’ರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ
BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ