ಬೆಂಗಳೂರು: ಗೃಹ ಜ್ಯೋತಿ” ಯೋಜನೆಯ ನೊಂದಣಿ ವ್ಯವಸ್ಥೆಯಾದ ಸೇವಾ ಸಿಂಧು ತಂತ್ರಾಂಶದಲ್ಲಿ ಗ್ರಾಹಕರನ್ನು De-Link ಮಾಡುವ ಸೌಲಭ್ಯ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು; ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅದರಂತೆ, ಸರ್ಕಾರಿ ಆದೇಶ ಸಂಖ್ಯೆ: ಎನರ್ಜಿ/164/ಪಿಎಸ್‌ಆರ್/2023, ದಿನಾಂಕ: 05.06.2023 ರಲ್ಲಿ ಹೊರಡಿಸಿದೆ.
“ಗೃಹ ಜ್ಯೋತಿ” ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ತಂತ್ರಾಂಶದ ಮೂಲಕ ನೊಂದಣಿ ಮಾಡಬಹುದಾಗಿರುತ್ತದೆ. ಆದರೆ, ಸೇವಾ ಸಿಂಧು ತಂತ್ರಾಂಶದಲ್ಲಿ ಗ್ರಾಹಕರನ್ನು De-Link ಮಾಡುವ ಸೌಲಭ್ಯವನ್ನು ಪ್ರಸ್ತುತ ಕಲ್ಪಿಸಿರುವುದಿಲ್ಲ. ಗ್ರಾಹಕರು ತಮ್ಮ ಮನೆಯನ್ನು ಬದಲಾಯಿಸಿದಂತಹ ಸಂದರ್ಭದಲ್ಲಿ ಹಾಗೂ ಇತರೆ ಸಂದರ್ಭಗಳಲ್ಲಿ ಈಗಾಗಲೇ ಈ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೊಂದು ಸ್ಥಾವರಕ್ಕೆ ಹೊಸದಾಗಿ ನೊಂದಣಿ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲು De-Link ಅವಕಾಶ ಮಾಡಿಕೊಡಬೇಕಾಗುತ್ತದೆ. ಆದ್ದರಿಂದ, ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು ಈ ಸಂಬಂಧ, ಮುಂದಿನ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.