ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕದಿಂದ ಕೈಲಾಸ ಮಾನಸ ಸರೋವರ, ಚಾರ್ ಧಾಮ್ ಮತ್ತು ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ನೀಡೋದಕ್ಕೆ ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದೆ.

 2019-20ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ ಎಂದಿದೆ.

2019-20ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ವತಿಯಿಂದ ಚಾರಧಾಮ್(ಬದರಿನಾಥ್, ಕೇದಾರನಾಥ್, ಗಂಗೋತ್ರಿ, ಯಮುನೋತ್ರಿ) ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.

2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-366ರಲ್ಲಿನ ಘೋಷಣೆಯಂತೆ ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.

ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ರವರ ಪುಸ್ತಾವನೆಯಲ್ಲಿ, ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ, ಚಾರ್‌ಧಾಮ್ ಮತ್ತು ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ಸಹಾಯಧನವನ್ನು ವಿತರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸುವಂತೆ ಕೋರಿರುತ್ತಾರೆ.

ಆದ್ದರಿಂದ, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆರವರ ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ, ಚಾರ್‌ಧಾಮ್ ಮತ್ತು ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ಸಹಾಯಧನವನ್ನು ವಿತರಿಸುವ ಸಂಬಂಧ ಈ ಹಿಂದೆ ಹೊರಡಿಸಲಾಗಿದ್ದ ಈ ಕೆಳಕಂಡ ಆದೇಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ:-

(1) ಸರ್ಕಾರದ ಆದೇಶ ಸಂಖ್ಯೆ: ಕಂಇ 10 ಮುಅಬಿ 2019 ದಿನಾಂಕ:15.10.2019, (2) ಸರ್ಕಾರದ ಆದೇಶ ಸಂಖ್ಯೆ: ಕಂಇ 11 ಮುಅಬಿ 2019 ದಿನಾಂಕ:15.10.2019 (3) ಸರ್ಕಾರದ ಆದೇಶ ಸಂಖ್ಯೆ: ಕಂಇ 174 ಮುಅಬಿ 2022 ದಿನಾಂಕ:27.06.2022.

ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.30,000/- (ಮೂವತ್ತು ಸಾವಿರ ಮಾತ್ರ) ಗಳಂತೆ, ಚಾರ್‌ಧಾಮ್ (ಗಂಗೋತ್ರಿ, ಯಮುನೋತ್ರಿ, ಕೇದಾರ್‌ನಾಥ್ ಮತ್ತು ಬದರೀನಾಥ್) ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/- (ಇಪ್ಪತ್ತು ಸಾವಿರ ಮಾತ್ರ) ಗಳಂತೆ ಮತ್ತು ಕಾಶಿ ಯಾತ್ರೆಯನ್ನು ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ ರೂ.5,000/-ಗಳಂತೆ ಒಂದು ಬಾರಿ ಮಾತ್ರ ಸಹಾಯಧನ ನೀಡಲಾಗುವುದು.

ಈ ಯೋಜನೆಗಳಿಗೆ ಸಂಬಂಧಿಸಿದಂತೆ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅನುಬಂಧ-1, ಅನುಬಂಧ-2 ಹಾಗೂ ಅನುಬಂಧ-3 ರಲ್ಲಿರುವಂತೆ ಆದೇಶಿಸಲಾಗಿದೆ. ಈ ವೆಚ್ಚಗಳಿಗೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕೆ “2250-00- 103-5-08(100) ಮಾನಸ ಸರೋವರ ಭಕ್ತಾಧಿಗಳಿಗೆ ನೆರವು” ಇದರಡಿಯಲ್ಲಿ ಭರಿಸತಕ್ಕದ್ದು ಅಂತ ತಿಳಿಸಿದೆ.

ಟಿ-20 ವಿಶ್ವಕಪ್ ಗೆದ್ದ ಭಾರತ : ವಿಮಾನದಲ್ಲೇ ಕುಳಿತು ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ | Watch Video

ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!

Share.
Exit mobile version