ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆ ಮಾರ್ಗಸೂಚಿಯಂತೆ ಪಿಡಿಓ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಅಂತ ತಿಳಿಸಿದೆ.
ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024-25ನೇ ಸಾಲಿನಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ- ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ತಿಳಿಸಲಾಗಿದೆ. ಅದರಂತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (2) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ನ್ನು ರೂಪಿಸಿ ಅಧಿಸೂಚಿಸಲಾಗಿರುತ್ತದೆ ಎಂದು ಹೇಳಿದೆ.
ಸದರಿ ವರ್ಗಾವಣೆ ನಿಯಮಗಳ ನಿಯಮ 9 ರನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆಗಳನ್ನು ಕ್ಯಾಲೆಂಡರ್ ವರ್ಷದ ಸಾಮಾನ್ಯವಾಗಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಮತ್ತು ಮೇ ಮಾಹಗಳ ನಡುವಿನಲ್ಲಿ ಮಾಡಬಹುದು ಅಥವಾ ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರವು ಅಧಿಸೂಚಿಸಿದಂತೆ ಮಾಡಬಹುದಾಗಿರುತ್ತದೆ. ಆದ್ದರಿಂದ, 2025-26 ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪುಕ್ರಿಯೆಯನ್ನು ದಿನಾಂಕ: 17.04.2025 ರಿಂದ ದಿನಾಂಕ: 13.05.2025 ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದಿದೆ.
ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಮುಸಲ್ಮಾನರ ಮುಖ್ಯಮಂತ್ರಿಗಳೋ?: ವಿಜಯೇಂದ್ರ ಪ್ರಶ್ನೆ
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!