Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ರಾಜ್ಯ ಸರ್ಕಾರದಿಂದ ‘ರೆಸಾರ್ಟ್, ಹೋಂ ಸ್ಟೇ’ಗಳಿಗೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BREAKING NEWS: ರಾಜ್ಯ ಸರ್ಕಾರದಿಂದ ‘ರೆಸಾರ್ಟ್, ಹೋಂ ಸ್ಟೇ’ಗಳಿಗೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0911/03/2025 3:50 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್, ಹೋಮ್ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಮಹತ್ವದ ಕ್ರಮ ಕೈಗೊಂಡಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಕೆಲ ಮಾರ್ಗಸೂಚಿ ಕ್ರಮಗಳನ್ನು ಹೊರಡಿಸಿದೆ. ಅವುಗಳನ್ನು ಪಾಲನೆ ಮಾಡುವಂತೆಯೂ ಖಡಕ್ ಸೂಚನೆ ನೀಡಿದೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 06.03.2025 ರಂದು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಹಾರ್ಟ್ ಲ್ಯಾಂಡ್ ಹೋಂ ಸ್ಟೇನಲ್ಲಿ ವಾಸವಿದ್ದ ಎರಡು ವಿದೇಶಿಯರು, ಎರಡು ಭಾರತೀಯರನ್ನು ಹೋಮ್‌ ಮಾಲೀಕರು ರಾತ್ರಿ ಭೋಜನದ ನಂತರ ನಿರ್ಜನ ಪ್ರದೇಶದಲ್ಲಿ ನಕ್ಷತ್ರ ವೀಕ್ಷಣೆಗೆಂದು ಕರೆದುಕೊಂಡು ಹೋದ ಸಂದರ್ಭದಲ್ಲಿ ಮೂರು ದುಷ್ಕರ್ಮಿಗಳು ಪುರುಷ ಪವಾಸಿಗರೊಂದಿಗೆ ವಾಗ್ವಾದ ಮಾಡಿ ಅವರುಗಳನ್ನು ಸಮೀಪದಲ್ಲಿಯೇ ತುಂಗಾಭದ್ರ ಎಡದಂಡೆ ಕಾಲುವೆಗೆ ನೂಕಿರುತ್ತಾರೆಂದು ವರದಿ ಮಾಡಿರುತ್ತಾರೆ. ಮುಂದುವರೆದು, ಹೋಮ್‌ಸ್ಯೆ ಮಾಲೀಕಳು ಹಾಗೂ ಮತ್ತೊಬ್ಬ ಇಸ್ರೇಲ್ ಪ್ರಜೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿರುತ್ತಾರೆ. ಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದವರ ಪೈಕಿ ಒರಿಸ್ಸಾ ಮೂಲದ ವ್ಯಕ್ತಿ ಮೃತರಾಗಿರುವ ಘಟನೆ ಉಲ್ಲೇಖದ ಪತ್ರದಲ್ಲಿ ವರದಿಯಾಗಿರುತ್ತದೆ.

ಮೇಲಿನ ಘಟನೆಯು ಅತ್ಯಂತ ದು:ಖಕರ ಹಾಗೂ ವಿಷಾದನೀಯವಾದುದಾಗಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯತ್‌ನಲ್ಲಿ ಈ ರೀತಿಯ ದುರ್ಘಟನೆಗಳು ಜರುಗದ ರೀತಿಯಲ್ಲಿ ಕೆಳಕಂಡ ಸೂಚನೆಗಳನ್ನು ಹಾಗೂ ನಿರ್ದೇಶನಗಳನ್ನು ನೀಡಲಾಗಿದೆ:-

೩) ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ಸ್ಟೇಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳತಕ್ಕದ್ದು,

b) ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯತಕ್ಕದ್ದು.

c) ಪೊಲೀಸರಿಂದ/ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿಯನ್ನು ಪಡೆಯದೇ ನಿರ್ಜನ ಪ್ರದೇಶ/ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಹೋಮ್‌ಸ್ಟೇ ಮಾಲೀಕರು ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ.

ಈ ಸಂಬಂಧ ಅಗತ್ಯ ಸೂಚನೆಗಳನ್ನು ನಿಮ್ಮ ಜಿಲ್ಲೆಯ ಪುತಿ ರೆಸಾರ್ಟ್‌ ಹಾಗೂ ಹೋಮ್ ಸೈಗಳಿಗೆ ಖುದ್ದಾಗಿ ಜಾರಿಗೊಳಿಸಿ ಅವರಿಂದ ಸೂಕ್ತ ಮುಚ್ಚಳಿಕೆ ಪಡೆದುಕೊಳ್ಳುವುದು. ಪ್ರತಿ ರೆಸಾರ್ಟ್/ಹೋಮ್‌ಸ್ಯೆಗಳಿಂದ ಅವರ ಸ್ಥಳ ವೀಕ್ಷಣಾ ಕಾರ್ಯಕ್ರಮಗಳ ಪಟ್ಟಿಯನ್ನು ಪಡೆದು ಆ ಕಾರ್ಯಕ್ರಮಗಳಲ್ಲಿ ಯಾವುದೇ ಅಪಾಯವಿಲ್ಲದಿರುವುದನ್ನು ಖಾತರಿಪಡಿಸಿಕೊಳ್ಳಲು ತಿಳಿಸಿದ್ದಾರೆ.

ಈ ಪ್ರಕ್ರಿಯೆಯನ್ನು ಒಂದು ವಾರದಲ್ಲಿ ಕೈಗೊಂಡು ದಿನಾಂಕ:18.03.2025 ರೊಳಗೆ ತಪ್ಪದೇ ವರದಿಯನ್ನು ಸಲ್ಲಿಸಲು ಸೂಚಿಸಿದೆ.

BREAKING NEWS: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಅರೆಸ್ಟ್

BREAKING NEWS: ‘ಸಾಗರ ತಾಲ್ಲೂಕು ಕಚೇರಿ’ ಮೇಲೆ ‘ಲೋಕಾಯುಕ್ತ ದಾಳಿ’: ‘ನಕಲಿ ದಾಖಲೆ ಸೃಷ್ಠಿ’ ಬಗ್ಗೆ ದಾಖಲೆ ಪರಿಶೀಲನೆ | Lokayukta Raid

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.