ಬೆಂಗಳೂರು : ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ವಲಸೆ ಪ್ರಮಾಣ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶೈಕ್ಷಣಿಕ ವಿಭಾಗದಿಂದ ನೀಡಲಾಗುತ್ತಿರುವ ವಿದ್ಯಾರ್ಥಿಗಳ ដ (Students Migration Certificates) , ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬೆಂಗಳೂರು ಇವರಿಗೆ ಪ್ರತ್ಯಾಯೋಜಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ.
ಆದ್ದರಿಂದ ವಿದ್ಯಾರ್ಥಿಗಳು ವಲಸೆ ಪ್ರಮಾಣ ಪತ್ರವನ್ನು (Students Migration Certificates) ONLINE , ಮುಖಾಂತರ ಪಡೆಯಲು ಮಂಡಳಿಯು ಜಾಲತಾಣದಲ್ಲಿ (https://kseab.karnataka.gov.in) ಅವಕಾಶ ಕಲ್ಪಿಸಲಾಗಿದೆ.