Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಲದ ಅಸಲು ಕಟ್ಟಿದ್ದರೆ ರೈತರ ‘ಸಂಪೂರ್ಣ ಬಡ್ಡಿ’ ಮನ್ನಾ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
KARNATAKA

ಸಾಲದ ಅಸಲು ಕಟ್ಟಿದ್ದರೆ ರೈತರ ‘ಸಂಪೂರ್ಣ ಬಡ್ಡಿ’ ಮನ್ನಾ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

By kannadanewsnow0721/01/2024 5:49 PM
vidhana soudha
vidhana soudha

ಬೆಂಗಳೂರು: ಸಹಕಾರ ಬ್ಯಾಂಕು’ಗಳ ಸಾಲದ ಅಸಲು ಕಟ್ಟಿದ್ದರೇ ‘ಸಂಪೂರ್ಣ ಬಡ್ಡಿ’ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕೆಲ ದಿನಗಳ ಹಿಂದೆ ಘೋಷಿಸಿದ್ದರು. ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು. ರಾಜ್ಯದ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವಂತ ಸಾಲದ ಅಸಲು ಕಟ್ಟಿದರೆ , ಅದರ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು.

ಈಗ ಬಗ್ಗೆ ರಾಜ್ಯ ಸರ್ಕಾರದಿಂದ ಅಂತಿಮ ಆದೇಶವನ್ನು ಹೊರಡಿಸಿದ್ದರು, ಅದರಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ.

ರ್ಕಾರದ ಆದೇಶದಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಉದ್ಭವಿಸಿರುವ ಅನಾವೃಷ್ಟಿಗಳ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸಹಕಾರ ಸಂಸ್ಥೆಗಳಿಂದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದು ಸಾಲ ಮರುಪಾವತಿಸಲು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದನ್ನು ಮತ್ತು ಇದರಿಂದ ಸಹಕಾರ ಸಂಸ್ಥೆಗಳು ನಬಾರ್ಡ್ ನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೇ ಪುನಃ ರೈತರಿಗೆ ಸಾಲ ನೀಡಲು ತೊಂದರೆಯಾಗುತ್ತಿರುವುದನ್ನು ಮನಗಂಡು ಇಂತಹ ಸುಸ್ತಿದಾರರಾದ ರೈತರನ್ನು ಋಣಮುಕ್ತರನ್ನಾಗಿ ಮಾಡಿ ಮುಂದಿನ ತಮ್ಮ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆದು ಅರ್ಹತೆ ಗಳಿಸಲು ಸರ್ಕಾರವು ಯೋಜನೆ ರೂಪಿಸುವುದು ಅತ್ಯವಶ್ಯಕವಾಗಿರುತ್ತದೆ.

ಮೇಲೆ ಓದಲಾದ (2) ರ ಸಹಕಾರ ಸಂಘಗಳ ನಿಬಂಧಕರ ಪತ್ರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳನ್ನು ಪಡೆದು ದಿನಾಂಕ:31.12.2023ರ ಅಂತ್ಯಕ್ಕೆ ಸಹಕಾರ ಸಂಸ್ಥೆಗಳಿಗೆ 56,879 ರೈತರಿಂದ ರೂ. 58,515.96 ಲಕ್ಷಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲಗಳು ಸುಸ್ತಿಯಾಗಿದ್ದು, ಇದರ ಮೇಲಿನ ಬಡ್ತಿ ಬಾಬು ರೂ. 44,020.50 ಲಕ್ಷಗಳಾಗಿರುತ್ತವೆ. ಎಂದು ತಿಳಿಸಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮೇಲಿನ ಅಸಲನ್ನು ಪಾವತಿಸದ ರೈತರಿಗೆ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರವು ತೀರ್ಮಾನಿಸಿ ಅದರಂತೆ ಕೆಳಕಂಡ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ: ಸಿಒ 291 ಸಿಎಲ್‌ಎಸ್ 2023, ಬೆಂಗಳೂರು, ದಿನಾಂಕ: 20.01.2024

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರೈತರು ರಾಜ್ಯದ ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ, ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ತಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರಾತಿ ನೀಡಲಾಗಿದೆ.
ಷರತ್ತುಗಳು :
1. ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
2, ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್‌ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.
3. ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರಣ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.

ಈ ಯೋಜನೆಯಡಿಯಲ್ಲಿ ಪ್ರಾಥಮಿಕ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್‌) ಗಳಿಗೆ ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲು ದಿನಾಂಕ:01.04.2004 ಕ್ಕಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಬಡ್ಡಿ ಪಾವತಿಸಲು ಬಾಕಿ ಇದ್ದ ದಿನಾಂಕದಿಂದ ಸಾಲ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿಮಾಡಲಾಗಿರುವ ಬಡ್ತಿ, ದರ ಅಥವಾ ಶೇ.12 ರ ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂತಹ ಬನ್ನಿ ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.
5. ದಿನಾಂಕ:01.04.2004ರ ನಂತರದಲ್ಲಿನ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬನ್ನಿ ಮತ್ತು ಸರ್ಕಾರ ಪಾವತಿಸಬೇಕಾದ ಬಡ್ಡಿ ಸಹಾಯಧನದ ಒಟ್ಟು ಬಡ್ಡಿ ಅಥವಾ ಗರಿಷ್ಟ ಶೇ.12 ಇದರಲ್ಲಿ ಯಾವುದು ಕಡಿಮೆಯೋ ಆ ಬಡ್ಡಿಯನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು. ರೂ.10.00 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ಸಾಮಾನ್ಯ ಬಡ್ಡಿ ದರದಲ್ಲಿ ವಿತರಿಸಿದ್ದರೂ ಸಹ ಆಯಾ ವರ್ಷದಲ್ಲಿ ರೂ.10.00 ಲಕ್ಷಗಳವರೆಗೆ ನಿಗದಿಪಡಿಸಿದ ಬಡ್ಡಿ ದರದನ್ವಯ ಬಡ್ಡಿ ಮನ್ನಾ ಮೊತ್ತ ಕ್ಷೇಮು ಮಾಡತಕ್ಕದ್ದು.
6. ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ, ವಸೂಲಿ ವೆಚ್ಚ (Recovery Charges) ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಷೇಮು ಮಾಡತಕ್ಕದ್ದಲ್ಲ.
7. ಈ ಯೋಜನೆಯಲ್ಲಿ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಒದಗಿಸಿರುವ ಆಯವ್ಯಯದ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಲೆಕ್ಕಶೀರ್ಷಿಕೆಯಲ್ಲಿ ಭರಿಸತಕ್ಕದ್ದು.
8. ಈ ಯೋಜನೆಯಡಿ ಕ್ಷೇಮ್ ಬಿಲ್ಲುಗಳನ್ನು ಸಹಕಾರ ಸಂಘಗಳು ವಸೂಲಾತಿ ಅಂತಿಮ ದಿನಾಂಕದಿಂದ 45 ದಿನಗಳೊಳಗಾಗಿ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು, ರೈತರು ಸುಸ್ತಿ ಅಸಲು ಮೊತ್ತವನ್ನು ಮರುಪಾವತಿಸುವ ದಿನಾಂಕದವರೆಗೆ ಮಾತ್ರ ಬಡ್ಡಿ ಕ್ಷೇಮುಗಳಿಗೆ ಅವಕಾಶವಿರುತ್ತದೆ. ಯಾವುದೇ ಕಾರಣದಿಂದಾಗಿ ಕ್ಷೇಮು ಮೊತ್ತ ಬಿಡುಗಡೆಗೆ ಆಗುವ ವಿಳಂಬದ ಅವಧಿಗೆ ಯಾವುದೇ ಕ್ಷೇಮುಗಳಿಗೆ ಅವಕಾಶವಿರುವುದಿಲ್ಲ.
9. ಪ್ಯಾಕ್ಸ್/ಲ್ಯಾಂಪ್ಸ್ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕುಗಳ ಬಿಲ್ಲುಗಳನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಬಿಲ್ಲುಗಳನ್ನು ಬಿಡುಗಡೆಗೆ ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್ ಬ್ಯಾಂಕ್ ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು.
10. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್‌)ಗಳ ಬಿಲ್ಲುಗಳನ್ನು ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಅಂತ ತಿಳಿಸಿದ್ದಾರೆ.

Good news for annadatas: Official order to waive interest on principal payment issued State govt issues official order to waive off 'full interest' on farmers if loan principal is paid ಅನ್ನದಾತರಿಗೆ ಗುಡ್‌ನ್ಯೂಸ್‌: ಅಸಲು ಪಾವತಿಸಿದ್ರೆ ಬಡ್ಡಿ ಮನ್ನಾ ಮಾಡಿ ಅಧಿಕೃತ ಆದೇಶ ಪ್ರಕಟ ಸಾಲದ ಅಸಲು ಕಟ್ಟಿದ್ದರೆ ರೈತರ ‘ಸಂಪೂರ್ಣ ಬಡ್ಡಿ’ ಮನ್ನಾ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.