ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ.
ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಕೇವಲ 241 ಹುದ್ದೆಗಳು ಭರ್ತಿ ಯಾಗಿದ್ದು, 465 ಹುದ್ದೆಗಳು ಖಾಲಿ ಇರುತ್ತವೆ. ಇವುಗಳನ್ನು ತುರ್ತಾಗಿ ತುಂಬಲು ಕೋರಲಾಗಿರುತ್ತದೆ ಎಂದಿದ್ದಾರೆ.
ದಿ: 31.01.2024 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ನಡೆದ DHO ಮತ್ತು RCHO ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿಗಳ (Casualty Medical Officer) ಹುದ್ದೆಗಳು ಖಾಲಿಯಿರುವುದರಿಂದ ತುರ್ತು ವೈದ್ಯಕೀಯ ಸೇವೆ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಯಲ್ಲಿ ತೊಂದರೆ ಉಂಟಾಗುತ್ತಿರುವುದರಿಂದ CMO ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಅನುಮತಿ ನೀಡುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.
ದಿ: 07.01.2025 ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಇಲಾಖೆಯಲ್ಲಿ CNO ಹುದ್ದೆಗಳು ಖಾಲಿಯಿರುವುದರಿಂದ ಇಲಾಖೆಯಲ್ಲಿ ತುರ್ತು ವೈದ್ಯಕೀಯ ಸೇವೆ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಯಲ್ಲಿ ತೊಂದರೆ ಉಂಟಾಗುತ್ತಿರುವುದರಿಂದ ಈ ಹುದ್ದೆಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಬಗ್ಗೆ ತುರ್ತಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ: ಆಕುಕ 619 ಹೆಚ್‌ಎಸ್‌ಹೆಚ್ 2022 ದಿನಾಂಕ:17-01-2024ರ ಪ್ರಕಾರ ಇಲಾಖೆಯಲ್ಲಿ ಖಾಲಿಯಿರುವ 337 ತಜ್ಞ ವೈದ್ಯರನ್ನು ಮತ್ತು 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ: ಆಕುಕ 228 ಹೆಚ್‌ಎಸ್‌ಹೆಚ್ 2020 ದಿನಾಂಕ:01-07-2020ರಲ್ಲಿ ಇಲಾಖೆಯಲ್ಲಿ ಗ್ರಾಮೀಣ ಭಾಗ ತಾಲ್ಲೂಕು ಕೇಂದ್ರ/ಜಿಲ್ಲಾ ಕೇಂದ್ರ/ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಂ.ಬಿ.ಬಿ.ಎಸ್ ಗುತ್ತಿಗೆ ವೈದ್ಯರ ವೇತನವನ್ನು ಹೆಚ್ಚಿಸಿ ಆದೇಶಿಸಲಾಗಿದೆ.
ಮುಖ್ಯ ಆಡಳಿತಾಧಿಕಾರಿಗಳು, ಆಕುಕೌರವರಿಂದ ಪಡೆದ ಮಾಹಿತಿ ಪ್ರಕಾರ ಸರ್ಕಾರದ ಆದೇಶ ಸಂಖ್ಯೆ: ಆಕುಕ 619 ಹೆಚ್‌ಎಸ್ಎಹೆಚ್ 2022 ದಿನಾಂಕ:17-01-2024ದ ಮುಂಚೆ 248 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸದರಿ ಆದೇಶದ ನಂತರ 164 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಸೇರಿ ಒಟ್ಟು 412 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆಂದು ಮಾಹಿತಿ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ: ಆಕುಕ 228 ಹೆಚ್‌ಎಸ್‌ಹೆಚ್ 2020 ದಿನಾಂಕ:01-07-2020ರಂತೆ ತಾಲ್ಲೂಕು ಕೇಂದ್ರ/ಜಿಲ್ಲಾ ಕೇಂದ್ರ/ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಂ.ಬಿ.ಬಿ.ಎಸ್ ಗುತ್ತಿಗೆ ವೈದ್ಯರನ್ನು ತೆಗೆದುಕೊಳ್ಳಲು ಅವಕಾಶವಿದ್ದರೂ, ಇತ್ತೀಚಿನ ಸರ್ಕಾರದ ಆದೇಶ ಸಂಖ್ಯೆ: ಆಕುಕ 619 ಹೆಚ್‌ಎಸ್ಎಹೆಚ್ 2022 ದಿನಾಂಕ:17- 01-2024ರಲ್ಲಿ 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಹೆಚ್ಚುವರಿಯಾಗಿ ಗ್ರಾಮೀಣ ಪ್ರದೇಶದಲ್ಲಿ ಗುತ್ತಿಗೆಯ ಮೇಲೆ ನೇಮಕ ಮಾಡಲು ಆದೇಶಿಸಿರುವುದರಿಂದ ಹಿಂದಿನ ಆದೇಶದಲ್ಲಿ ಕಲ್ಪಿಸಿರುವ ಅವಕಾಶವನ್ನು ಬಳಸಿ ಪ್ರಸ್ತುತ ನಗರ ಪ್ರದೇಶಗಳಲ್ಲಿ ಎಂ.ಬಿ.ಬಿ.ಎಸ್. ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿಲ್ಲ. ಆದರೆ ನಗರ ಪ್ರದೇಶಗಳಲ್ಲಿ ಎಂ.ಬಿ.ಬಿ.ಎಸ್. ವೈದ್ಯರನ್ನು ಖಾಲಿ ಹುದ್ದೆಯ ಮೇಲೆ ನೇಮಕ ಮಾಡಿಕೊಳ್ಳದೇ ಇರಲು ಯಾವುದೇ ಆದೇಶ ಇರುವುದಿಲ್ಲ. ಅಲ್ಲದೇ ಸರ್ಕಾರದ ಈ ಆದೇಶದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಕಲ್ಪಿಸಿರುವ ಅವಕಾಶದ ಉದ್ದೇಶವು ಆರೋಗ್ಯ ಇಲಾಖೆಯ ಸೇವೆಗಳನ್ನು ಯಾವುದೇ ತೊಡಕು ಇಲ್ಲದೇ ಜನಗಳಿಗೆ ತಲುಪಿಸುವುದಾಗಿರಿವುದರಿಂದ, ಈ ರೀತಿಯಾಗಿ ಸರ್ಕಾರಿ ಆದೇಶವನ್ನು ತಿಳಿದುಕೊಂಡರೆ ಅದು ತರ್ಕಬದ್ಧವಾಗಿರುವುದಿಲ್ಲ ಎಂದಿದ್ದಾರೆ.
ಮುಂದುವರೆದು, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಮಂಜೂರಾದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ನಿಯಮಗಳನ್ವಯ 6 ವರ್ಷ ಗ್ರಾಮೀಣ ಸೇವೆ ಪೂರೈಸಿದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲು ಅವಕಾಶವಿದ್ದರೂ, ಸದರಿ ಹುದ್ದೆಗಳು ಖಾಲಿ ಇರುವಾಗ ಹಾಗೂ ಸೂಕ್ತ ವೈದ್ಯಕೀಯ ಅಧಿಕಾರಿಗಳು ಈ ಹುದ್ದೆಗಳಿಗೆ ಲಭ್ಯ ಆಗುವವರಗೆ ಈ ಹುದ್ದೆಗಳಿಗೆ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿರುವ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.
ಆದುದರಿಂದ ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು ಹಾಗೂ ಸಾರ್ವಜನಿಕರಿಗೆ ತಾಯಿ ಮತ್ತು ಮಕ್ಕಳ ಆರೋಗ್ಯದ ಉತ್ತಮ ಸೇವೆಯನ್ನು ಒದಗಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ (Casualty Medical Officer) ಖಾಲಿ ಹುದ್ದೆಗಳಿಗೆ ಆದೇಶ ಸಂ: ಆಕುಕ 228 ಹೆಚ್‌ಎಸ್‌ಹೆಚ್ 2020 – ದಿನಾಂಕ: 01-07-2020ರಲ್ಲಿ ಸೂಚಿಸಿರುವ ಮಾಸಿಕ ಸಂಭಾವನೆಯಂತೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ನಿಗಧಿಯಾಗಿರುವ ವೇತನ ಶೇರ್ಷಿಕೆಯ ಉಪ ಲೆಕ್ಕ ಶೇರ್ಷಿಕೆಯ 036 ಅಡಿಯಲ್ಲಿ ಕಡ್ಡಾಯ ಗ್ರಾಮೀಣ ಅಭ್ಯರ್ಥಿಗಳ ಗೌರವ ಧನಕ್ಕಾಗಿ ಮೀಸಲಾಗಿರುವ ಅನುದಾನದಿಂದ ಆಯುವ್ಯ ಅನುದಾನದ ಮಿತಿ ಒಳಪಡಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಆದೇಶದಲ್ಲಿ ಸೂಚಿಸಿರುವ ಷರತ್ತುಗಳನ್ವಯ ಅನುಷ್ಠಾನಕ್ಕಾಗಿ ಹಾಗೂ ಅನುಪಾಲನಾ ವರದಿಯನ್ನು ಸಲ್ಲಿಸುವುದಕ್ಕಾಗಿ ಆಯುಕ್ತರನ್ನು ಸೂಚಿಸಲಾಗಿದೆ ಎಂದಿದ್ದಾರೆ.
BREAKING: ರಾಜ್ಯದಲ್ಲಿ ಘೋರ ದುರಂತ: ಕೆಮಿಕಲ್ ಡಂಪ್ ಮಾಡುವಾಗ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ
BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ