ಬೆಂಗಳೂರು: ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ಹೊರ ರೋಗಿಗಳ ಸೇವೆ(OPD) ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ರದ್ದುಗೊಳಿಸಿ, ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋಲ್ಕತಾದ ಆರ್.ಜಿ.ಕರ್ ವೈದ್ಯಕೀಯ ಸಂಸ್ಥೆಯ ಕರ್ತವ್ಯ ನಿರತ ಯುವ ವೈದ್ಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘದ ಕರೆಗೆ ಬೆಂಬಲ ಸೂಚಿಸಿ, ಸದರಿ ಪ್ರತಿಭಟನೆಯಲ್ಲಿ ಭಾಗವಹಿಸಿ ತುರ್ತು ಸೇವೆ ಹೊರತುಪಡಿಸಿ ಇತರೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ದಿನಾಂಕ: 17-08-2024 ರಂದು ಸ್ಥಗಿತಗೊಳಿಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಸಚಿವರಿಗೆ ಪತ್ರವನ್ನು ನೀಡಿರುತ್ತಾರೆ ಎಂದಿದ್ದಾರೆ.
ದಿನಾಂಕ: 17-08-2024 ರಂದು ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ವೈದ್ಯಕೀಯ ಸೇವೆಯು ವ್ಯತ್ಯಯವಾಗಿ ಸಾರ್ವಜನಿಕ ಆರೋಗ್ಯ ಸೇವೆಗೆ ದಕ್ಕೆಯಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಎಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ ಸಾರ್ವಜನಿಕ ತುರ್ತು ವೈದ್ಯಕೀಯ ಸೇವೆಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸುವುದು. ಸದರಿ ದಿನಾಂಕದಂದು ಯಾವುದೇ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಸೂಚಿಸಿದ್ದಾರೆ.
ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭ | South Western Railway