ಬೆಂಗಳೂರು: ನಿನ್ನೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿ ರಂಗನ್ ಅವರು ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಡಾ.ಕೆ ಕಸ್ತೂರಿ ರಂಗನ್ ಅವರು ಖ್ಯಾತ ಬಾಹ್ಯಾಕಾಶ ವಿಜ್ಞಾನಗಳು ಹಾಗೂ ಇಸ್ರೋ ಸಂಸ್ಥೆಯ ಮಾಜಿ ಮುಖ್ಯಸ್ಥರು ಆಗಿದ್ದರು. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದಂತ ಇವರು ದಿನಾಂಕ 25-04-2025ರಂದು ನಿಧನರಾಗಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.
ಡಾ.ಕೆ ಕಸ್ತೂರಿ ರಂಗನ್ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದ್ದಾರೆ.
GOOD NEWS: ಇನ್ಮುಂದೆ ಉದ್ಯೋಗದಾತರ ಅನುಮತಿಯಿಲ್ಲದೇ ‘PF ಖಾತೆ’ ವರ್ಗಾವಣೆಗೆ ಅವಕಾಶ | EPFO Update