ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಆರೋಗ್ಯ ಇಲಾಖೆಯಲ್ಲಿನ ಮಹಿಳಾ ವೈದ್ಯರು, ಸಿಬ್ಬಂದಿಯ ಮೇಲಿನ ಹಲ್ಲೆ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಲು ಸಮಿತಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಅಧಿಕೃತ ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ. ಅದರಲ್ಲಿ ಇತ್ತಿಚಿಗೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಹಾಗೂ ಮಹಿಳಾ ಸಿಬ್ಬಂದಿಯ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಮೇಲಧಿಕಾರಿಗಳಿಗೆ ಶಿಪಾರಸ್ಸು ಮಾಡಲು ನಿರ್ದೇಶಕರು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ, ಈ ಕೆಳಕಂಡ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ಇನ್ನೂ ಸಮಿತಿಯ ಅಧ್ಯಕ್ಷರನ್ನಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಸದಸ್ಯರನ್ನಾಗಿ ಜಂಟಿ ನಿರ್ದೇಶಕರು, ವೈದ್ಯಕೀಯ, ಆರೋಗ್ಯ ಸೌಧ, ಬೆಂಗಳೂರು, ಉಪ ನಿರ್ದೇಶಕರು ಆರೋಗ್ಯ ಮತ್ತು ಯೋಜನೆ-1, ಬೆಂಗಳೂರು, ಉಪ ನಿರ್ದೇಶಕರು ಮಾನಸಿಕ ಆರೋಗ್ಯ, ಬೆಂಗಳೂರು, ಉಪ ನಿರ್ದೇಶಕರು, ವೈದ್ಯಕೀಯ ಮತ್ತು ಕೆಜಿಎಂಓಎ ಅಧ್ಯಕ್ಷರು, ಆರೋಗ್ಯಸೌಧ, ವೈದ್ಯಕೀಯ ಅಧೀಕ್ಷಕರು, ಕೆಸಿ ಜನರಲ್ ಆಸ್ಪತ್ರೆ, ಬಂಗಳೂರು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಬಳ್ಳಾರಿ, ಆಡಳಿತ ವೈದ್ಯಾಧಿಕಾರಿಗಳು, ಆನೇಕಲ್ ಹಾಗೂ ವಿಶೇಷ ಆಹ್ವಾನಿತರಾಗಿ ನ್ಯಾಯವಾದಿಗಳು-1, ಪೊಲೀಸ್ ಮಹಿಳಾ ಅಧಿಕಾರಿ-1 ನೇಮಿಸಲಾಗಿದೆ.
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ
BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್