ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಅಂಗ್ಲ ಮಾಧ್ಯಮದ [ದ್ವಿಭಾಷಾ (Bilingual) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ದ್ವಿಭಾಷಾ ಮಾಧ್ಯಮದ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ [ದಿಭಾಷಾ (Bilingual)] ವಿಭಾಗವನ್ನು ಯಾವುದೇ ಆರ್ಥಿಕ ಹೊರೆಯಾಗದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಉಲ್ಲೇಖಿತ ಆದೇಶದನ್ವಯ ಅನುಮತಿ ನೀಡಿ ಆದೇಶಿಸಲಾಗಿದೆ.
ಸರ್ಕಾರದ ಉಲ್ಲೇಖಿತ ಆದೇಶದಲ್ಲಿನ ಅಂಶಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.