ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬೆನ್ನಲ್ಲೇ ದಾಖಲಾಗಿದ್ದಂತ 2ನೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ.
ಜೂನ್.22ರಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಜೂನ್.23ರಂದು ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು.
ನಿನ್ನೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2ನೇ ಅಸಹಜ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಅಂದಹಾಗೇ ಮೊದಲ ಪ್ರಕರಣದಲ್ಲಿ ಅರಕಲಗೂಡು ಮೂಲದ ಯುವಕನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೇ, ನಿನ್ನೆ ಎರಡನೇ ಪ್ರಕರಣವನ್ನು ಹೊಳೆನರಸೀಪುರ ಮೂಲದ ಯುವಕ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದನು. ಈ ಎರಡು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ.
ಇದೇ ಮೊದಲ ಬಾರಿಗೆ ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ‘ಇಂಡಿಯಾ ಹೌಸ್’
ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್