ಬೆಂಗಳೂರು: ರಾಜ್ಯದಲ್ಲಿ ಸೈಬರ್ ಕ್ರೈ ತಡೆಗೆ ಮಹತ್ವದ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಇದರ ಭಾಗವಾಗಿ 43 ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಿ ಆದೇಶಿಸಿದೆ. ಅಲ್ಲದೇ ಠಾಣಾಧಿಕಾರಿಗಳನ್ನು ನೇಮಕ ಮಾಡಿದೆ.
ಈ ಕುರಿತಂತೆ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಸಿಇಎನ್ ಪೊಲೀಸ್ ಠಾಮೆಗಳ ಮಂಜೂರಾತಿ ಬಲದಿಂದ ತಲಾ 1 ಪಿಎಸ್ಐ ಹುದ್ದೆಯನ್ನು ಪಿಐ ದರ್ಜೆಗೆ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ ಎಂದಿದೆ.
ಇನ್ನೂ 43 ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಡಿವೈಎಸ್ಪಿ ಹುದ್ದೆಗಳನ್ನಾಗಿ ಮೇಲ್ದರ್ಜೆಗೇರಿಸಲು ಆದೇಶಿಸಲಾಗಿದೆ. ಆರ್ಥಿಕ ಇಲಾಖೆಯ ದಿನಾಂಕ 21-02-2024ರಲ್ಲಿ ನೀಡಿರುವ ಸಹಮತಿ ಮೇರೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.