ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ.
ಇಂದು ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ. ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು. ಅವರೆಲ್ಲರೂ ವಯೋಮಿತಿ ಸಡಿಲಿಕೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯ ಹಿನ್ನಲೆಯಲ್ಲಿ 3 ವರ್ಷ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ತಿಳಿಸಿದೆ.
ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ.?
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು ಮುಂದೂಡುತ್ತಾ ಬಂದಿರುತ್ತದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಾಗಿದ್ದು ಹುದ್ದೆಗಳ ನೇಮಕಾತಿಯಿಂದ ವಂಚಿತರಾಗಿ ನಿರುದ್ಯೋಗಿಗಳಾಗಿರುವುದರಿಂದ ರಾಜ್ಯ ಸರ್ಕಾರದ ನೇರ ನೇಮಕಾತಿಯಲ್ಲಿ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (One time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿಲಾಗಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ‘ಅನುದಾನಿತ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ‘7ನೇ ವೇತನ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!