Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

“ತಪ್ಪು ಮಾಹಿತಿ ಹರಡಬೇಡಿ” : ‘ರಾಹುಲ್ ಗಾಂಧಿ’ ವಿರುದ್ಧ ಚುನಾವಣಾ ಆಯೋಗ ತೀವ್ರ ವಾಗ್ದಾಳಿ

07/06/2025 4:50 PM

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ ‘ನಕಲಿ ದಾಖಲೆ’ ಸೃಷ್ಟಿಸಿ ‘ಆಸ್ತಿ ವಂಚನೆ’ಗೆ ಬ್ರೇಕ್: ಇಂದಿನಿಂದ ‘ಆಧಾರ್ ಜೋಡಣೆ’ ಆರಂಭ
KARNATAKA

BIG NEWS: ರಾಜ್ಯ ಸರ್ಕಾರದಿಂದ ‘ನಕಲಿ ದಾಖಲೆ’ ಸೃಷ್ಟಿಸಿ ‘ಆಸ್ತಿ ವಂಚನೆ’ಗೆ ಬ್ರೇಕ್: ಇಂದಿನಿಂದ ‘ಆಧಾರ್ ಜೋಡಣೆ’ ಆರಂಭ

By kannadanewsnow0927/08/2024 5:01 AM

ಬೆಂಗಳೂರು : ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್‌ಟಿಸಿ ಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ. ಇದರಿಂದ ವಂಚನೆಗೊಳಗಾದವರು ಹಲವು ವರ್ಷಗಳಿಂದ ಕೋರ್ಟ್‌ ಕಚೇರಿಗೆ ಅಲೆಯುವಂತಾಗಿದೆ. ಇಂತಹ ಪ್ರಕರಣಗಳನ್ನು ತಡೆಯುವ ಹಾಗೂ ಜನಸಾಮಾನ್ಯರ ಪಾಲಿಗೆ ಅವರ ಜಮೀನಿನ ಹಕ್ಕನ್ನು ರಕ್ಷಿಸಿ ಅಧಿಕೃತಗೊಳಿಸುವ ಉದ್ದೇಶದಿಂದ ಆಧಾರ್‌ ಜೋಡಣೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ” ಎಂದರು.

ಮುಂದುವರೆದು, “ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ದೋಚುವವರ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಹಲವು ಜನರಿಂದ ಕೇಳಿಬಂದಿತ್ತು. ಇತ್ತೀಚೆಗೆ ಹಲವು ಶಾಸಕರು, ಸಚಿವರು ಹಾಗೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದರು. ಇದೇ ಕಾರಣಕ್ಕೆ ಆಧಾರ್‌ ಜೋಡಣೆ ಅಭಿಯಾನಕ್ಕೆ ಮೂರು ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಇದೀಗ ಪ್ರಾಯೋಗ ಯಶಸ್ವಿಯಾಗಿದ್ದು ಇಂದಿನಿಂದಲೇ ರಾಜ್ಯಾದ್ಯಂತ ಆಧಾರ್‌ ಜೋಡನೆ ಅಭಿಯಾನವನ್ನು ವಿಸ್ತರಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜನರಲ್ಲೂ ಮನವಿ ಮಾಡಿದ ಸಚಿವರು, “ಜನ ಸಾಮಾನ್ಯರು ಇದನ್ನು ಅನಾನುಕೂಲ ಎಂದು ಭಾವಿಸದೆ ಜಮೀನಿನ ಮಾಲಿಕತ್ವದ ಸುರಕ್ಷತೆಯ ದೃಷ್ಟಿಯಿಂದ ಹಾಗೂ ವಂಚನೆ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ ನೋಂದಣಿ ಸಮಯದಲ್ಲಿ ಆಧಾರ್‌ ಜೋಡಣೆಗೆ ಸಕಾರಾತ್ಮಕವಾಗಿ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಸೆ.2 ರಿಂದ ರಾಜ್ಯಾದ್ಯಂತ ಎನಿವೇರ್‌ ನೋಂದಣಿ

ಸೆಪ್ಟಂಬರ್ 2 ರಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಯಿತು” ಎಂದರು.

ಮುಂದುವರೆದು, “ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ ಜನ ಸಂದಣಿ ಇಲ್ಲದ ಯಾವುದೇ ಉಪ ನೋಂದಣಿ ಕಚೇರಿಗೆ ತೆರಳಿ ಆನ್‌ಲೈನ್‌ ಮೂಲಕ ಸಮಯ ಕಾಯ್ದಿರಿಸಿ ತನ್ನ ಆಸ್ತಿ ನೋಂದಣಿ ಮಾಡಿಕೊಳ್ಳಲು “ಎನಿವೇರ್” ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಈ ಯೋಜನೆಯನ್ನು ಫೆಬ್ರವರಿಯಿಂದಲೇ ತುಮಕೂರು ಹಾಗೂ ಬೆಳಗಾವಿಯಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗಿತ್ತು.

ಆ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಎನಿವೇರ್‌ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ” ಎಂದು ಅವರು ಮಾಹಿತಿ ನೀಡದರು.

ತಂತ್ರಜ್ಞಾನ ಬಳಸಿ ಜನಸ್ನೇಹಿ ಆಡಳಿತ

ಕಂದಾಯ ಇಲಾಖೆಯಲ್ಲಿ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಹಿಂದೆ ಆಸ್ತಿ ನೋಂದಣಿ ಅವಧಿಯನ್ನು ಕಡಿತಗೊಳಿಸಿ ಜನರ ಕೆಲಸಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕಾವೇರಿ-2 ತಂತ್ರಜ್ಞಾನವನ್ನು ಜಾರಿಗೆ ತರಲಾಗಿತ್ತು. ಇದೀಗ ಮತ್ತೊಮ್ಮೆ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಆರ್‌ಟಿಸಿಗೆ “ಆಧಾರ್‌ ಜೋಡಣೆ” ಹಾಗೂ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್‌ ಹಾಗೂ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ದಯಾನಂದ ಕೆ.ಎ ಉಪಸ್ಥಿತರಿದ್ದರು.

Job Alert : ಭಾರತೀಯ ರೈಲ್ವೆ ಇಲಾಖೆಯಲ್ಲಿ 14,298 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | RRB Recruitment 2024

Share. Facebook Twitter LinkedIn WhatsApp Email

Related Posts

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM2 Mins Read

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM1 Min Read

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM1 Min Read
Recent News

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

“ತಪ್ಪು ಮಾಹಿತಿ ಹರಡಬೇಡಿ” : ‘ರಾಹುಲ್ ಗಾಂಧಿ’ ವಿರುದ್ಧ ಚುನಾವಣಾ ಆಯೋಗ ತೀವ್ರ ವಾಗ್ದಾಳಿ

07/06/2025 4:50 PM

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM
State News
KARNATAKA

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

By kannadanewsnow0907/06/2025 4:54 PM KARNATAKA 2 Mins Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ…

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM

RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

07/06/2025 4:35 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.