ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಜರಾಯಿ ಇಲಾಖೆಯ ದೇಗುಲಗಳಿಗೆ ಡಿಜಿಟಲ್ ಸ್ಪರ್ಷ ನೀಡಲಾಗುತ್ತಿದೆ. ಅಲ್ಲದೇ ಪೂಜಾ ಸೇವೆಗಳನ್ನು ಆನ್ ಲೈನ್ ಮೂಲಕವೇ ಖರೀದಿಸೋದಕ್ಕೆ ಅವಕಾಶ ಕಲ್ಪಿಸಿ, ಆಪ್ ಕೂಡ ಬಿಡುಗಡೆ ಮಾಡಲಾಗಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಶೇಷ ಕಾಳಜಿಯ ಫಲವಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಏರ್ಪಾಡಾಗುವ ಸೇವೆಗಳನ್ನು ಆನ್ ಲೈನ್ ಮೂಲಕ ಹಾಗೂ ಮೊಬೈಲ್ ಆಪ್ ಮೂಲಕ ಖರೀದಿಸೋದಕ್ಕೆ ಅವಕಾಶ ನೀಡಲಾಗಿದೆ.
ಮೊದಲ ಹಂತದಲ್ಲಿ ಬೆಂಗಳೂರಿನ ಬನಶಂಕರಿಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಪೋರ್ಟಲ್ ಹಾಗೂ ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಇದಕ್ಕೆ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ರಾಜ್ಯದ ಮುಜರಾಯಿ ಇಲಾಖೆಯ ದೇಗುಲಗಳ ಸೇವೆಯನ್ನು ಆನ್ ಲೈನ್ ಮೂಲಕ ಕಾಯ್ದಿರಿಸೋದಕ್ಕೆ ಅವಕಾಶ ನೀಡಲಾಗುತ್ತಿದೆ.
BIG NEWS: ರಾಜ್ಯ ಸರ್ಕಾರದಿಂದ ‘VA ನೇಮಕಾತಿ’ಯಲ್ಲಿ ಮಹತ್ವದ ಬದಲಾವಣೆ: ‘ಸ್ಪರ್ಧಾತ್ಮಕ ಪರೀಕ್ಷೆ’ ನಿಗದಿ
BIG NEWS: ‘ಸರ್ಕಾರಿ ಕಾರ್ಯಕ್ರಮ’ಗಳ ಆರಂಭದಲ್ಲೇ ‘ನಾಡಗೀತೆ’ ಹಾಡುವುದು ಕಡ್ಡಾಯ – ‘ರಾಜ್ಯ ಸರ್ಕಾರ’ ಆದೇಶ