ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದಿನ ಬಜೆಟ್ ನಲ್ಲಿ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಮತ್ತೆ ಬಿಯರ್ ದರವನ್ನು ಹೆಚ್ಚಿಸೋದಕ್ಕೆ ಇಂದಿನ ಬಜೆಟ್ ನಲ್ಲಿ ನಿರ್ಧರಿಸಲಾಗಿದೆ.
ಇಂದು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2024-25 ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮದ್ಯದ ದರ ಮತ್ತೆ ಹೆಚ್ಚಿಸೋ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದಿಂದ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ನೀಡಲಾಗಿದೆ.
ಈಗಾಗಲೇ ಹಲವು ಬಾರಿ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಈಗ ರಾಜ್ಯ ಬಜೆಟ್ ಮಂಡನೆಯಲ್ಲೂ ಮತ್ತೆ ಬಿಯರ್ ದರವನ್ನು ಹೆಚ್ಚಳ ಮಾಡೋ ನಿರ್ಧಾರವನ್ನು ಪ್ರಕಟಿಸಲಾಗಿದೆ. ಈ ಮೂಲಕ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ನೀಡಲಾಗಿದೆ.
BREAKING : ವಿವಾಹದ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕ ಚಾಲನೆ : ಶೀಘ್ರ ರಾಜ್ಯಾದ್ಯಂತ ವಿಸ್ತರಣೆ