ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ 2024 ರ ಹೊಸ ವೇತನ ಶ್ರೇಣಿ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ನೇ ಕರ್ನಾಟಕ ಅಧಿನಿಯಮದ ಸಂಖ್ಯೆ: 14) ಪ್ರಕರಣ 3ರ ಉಪ-ಪ್ರಕರಣ (2)ರ ಪರಂತುಕದೊಡನೆ ಓದಿಕೊಂಡ, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ರಾಜ್ಯ ಸರ್ಕಾರವು ಈ ಮೂಲಕ ಈ ಮುಂದಿನ ನಿಯಮಗಳನ್ನು ರಚಿಸಿ ಈ ಕೆಳಗಿನಂತೆ ಆದೇಶ ಹೊರಡಿಸಿದೆ.