ಬೆಂಗಳೂರು : ರಾಜ್ಯ ಸರ್ಕಾರವು 2024-25ನೇ ಸಾಲಿಗೆ ಪಠ್ಯ ಪುಸ್ತಕ ಪರಿಷ್ಕರಿಸಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ 1ರಿಂದ 10ನೇ ತರಗತಿಯ ಕೆಲ ವಿಷಯಗಳ ಪಠ್ಯವನ್ನು ಪರಿಷ್ಕರಿಸಲಾಗಿದೆ.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005 ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ 01 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ ಹಾಗೂ 09 ಮತ್ತು 10 ನೇ ತರಗತಿಯ ಕನ್ನಡ ತೃತೀಯ ಭಾಷೆಯ ಪಠ್ಯಪುಸ್ತಕಗಳು ಮತ್ತು 06 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಗೆ ವಿಷಯವಾರು ತಜ್ಞರ ಸಮಿತಿಯನ್ನು ಹಾಗೂ ಪಠ್ಯಪುಸ್ತಕಗಳ ಪರಿಷ್ಕರಣಾ ಕಾರ್ಯನಿರ್ವಹಿಸುವ ಸಮಿತಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಲಹೆ ನೀಡುವ ಉದ್ದೇಶಕ್ಕಾಗಿ ಡಾ|| ಮಂಜುನಾಥ.ಜಿ.ಹೆಗಡೆ, ನಿವೃತ್ತ ಪ್ರಾಧ್ಯಾಪಕರು, ಚಿತ್ತರಗಿ ಗ್ರಾಮ, ಕುಮಟಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ ಇವರನ್ನು ಮುಖ್ಯ ಸಂಯೋಜಕರನ್ನಾಗಿ ಸಮಿತಿಯ ಅಧ್ಯಕ್ಷರು/ಸದಸ್ಯರುಗಳನ್ನು ಹಾಗೂ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(ರಿ), ಬೆಂಗಳೂರು ಇವರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ಸರ್ಕಾರವು ಆದೇಶ ಸಂಖ್ಯೆ ಇಪಿ.270 ಪಿ.ಎಂ.ಸಿ 2023, ದಿನಾಂಕ:25.09.2023 ರನ್ವಯ ಆದೇಶ ಹೊರಡಿಸಿರುತ್ತದೆ.
ಪರಿಷ್ಕರಣಾ ಸಮಿತಿಯು ಮುಖ್ಯವಾಗಿ ಈ ಕೆಳಕಂಡ ಅಂಶಗಳಿಗೆ ಆದ್ಯತೆಯನ್ನು ನೀಡಿ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ.
1. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ,
ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ.
2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ “2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ” ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ.
3. ವಿವಿಧ ಸಂಘಟನೆಗಳು, ವ್ಯಕ್ತಿಗಳು ಹಾಗೂ ಸರ್ಕಾರದ ಇಲಾಖೆಗಳು ಪಠ್ಯಪುಸ್ತಕದಲ್ಲಿ ನಿರ್ದಿಷ್ಟ ವಿಷಯಾಂಶವನ್ನು ಅಳವಡಿಸುವ/ಕೈಬಿಡುವ/ಪರಿಷ್ಕರಿಸುವ ಕುರಿತು ಮಾಡಿದ ಎಲ್ಲಾ ಮನವಿಗಳನ್ನು ಪರಿಶೀಲಿಸಿ ಸೂಕ್ತವೆನಿಸಿದ
4. ಸಲಹೆಗಳನ್ನು ಪರಿಷ್ಕರಣೆಯಲ್ಲಿ ಆಳವಡಿಸಿಕೊಳ್ಳಲಾಗಿದೆ. 4. ವಿಷಯಾಂಶಗಳಿಗೆ ಸಂಬಂಧಿಸಿದಂತೆ, ಪಠ್ಯಪುಸ್ತಕದಲ್ಲಿರುವ ಅಂಕಿ ಅಂಶಗಳನ್ನೂ ಮಾಹಿತಿಗಳನ್ನು, ನಕ್ಷೆಗಳನ್ನು, ಚಿತ್ರಗಳು ಮತ್ತು ವ್ಯಾಕಾರಣಾಂಶಗಳನ್ನು ಅಗತ್ಯವಿರುವ ಕಡೆ ಪರಿಷ್ಕರಿಸಲಾಗಿದೆ.
5. ಮಕ್ಕಳ ಪಠ್ಯಪುಸ್ತಕದ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಪಠ್ಯಪುಸ್ತಕಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಎರಡು ಸಂಪುಟಗಳಾಗಿ ವಿಭಾಗಿಸುವ ಸರ್ಕಾರದ ನಿರ್ಣಯಕ್ಕೆ ಅನುಸಾರವಾಗಿ, ಎರಡೂ ಸಂಪುಟಗಳಲ್ಲಿನ ಕಲಿಕಾಂಶಗಳು/ಪಾಠಗಳು ಸರಳತೆಯಿಂದ ಸಂಕೀರ್ಣತೆಯೆಡೆಗೆ ಸಾಗುವಂತೆ ವ್ಯವಸ್ಥಿತವಾಗಿ ಅಳವಡಿಸಲಾಗಿದೆ.
6. ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಪ್ರಮುಖ ಸಾಹಿತಿಗಳಿಗೆ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳಿಗೂ ಪ್ರಾಶಸ್ತ್ರ ನೀಡಲಾಗಿರುತ್ತದೆ.
7. ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ, ಸ್ಪರ್ಧಾತ್ಮಕ ಪರೀಕ್ಷಾ ದೃಷ್ಟಿಯಿಂದ ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಕೆಲವು ಹೊಸ ಅಧ್ಯಾಯಗಳು, ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.