ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಮುಗಲಭೆ, ಕ್ರೈಂ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ಅದರ ಭಾಗವಾಗಿ ಇಂದು ಸಿಎಂ ಸಿದ್ಧರಾಮಯ್ಯ ಅವರು ತಂತ್ರಾಂಶ, ಕೈಪಿಡಿಗಳನ್ನು ಬಿಡುಗಡೆ ಮಾಡಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತ್ಮಕ ಪೊಲೀಸ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ ಪೊಲೀಸ್ ಗೆ ಇರುವ ಉನ್ನತ ಹೆಸರನ್ನು ಉಳಿಸಿ-ಬೆಳೆಸಬೇಕು ಎಂದರು.
ಸಮಾಜದಲ್ಲಿ ಎಲ್ಲರೂ ನಿಶ್ಚಿಂತೆಯಿಂದ, ಭಯ ಮುಕ್ತವಾಗಿ ವಾಸಿಸುವ ವಾತಾವರಣ ಇರಬೇಕು. ಮಹಾತ್ಮಗಾಂಧಿ ಅವರ ಮಾತು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸೂಚನೆಯನ್ನು ಸಿಎಂ ಸಿದ್ಧರಾಮಯ್ಯ ನೀಡಿದರು.
ಕಾನೂನು ಸುವ್ಯವಸ್ಥೆ ಸುರಕ್ಷಿತವಾಗಿದ್ದರೆ ಅಭಿವೃದ್ಧಿ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಸಾಧ್ಯ. ಇವೆಲ್ಲದರಿಂದ ತಲಾ ಆದಾಯ, ಜಿಡಿಪಿ ಬೆಳವಣಿಗೆ ಆಗುತ್ತದೆ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದಾಗಿ ಅಸಮಾನತೆಯಿಂದ ಕೂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ್ಮ ಕೆಳಗಿನಅಧಿಕಾರಿಗಳು ಇನ್ನಷ್ಡು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಬೀಟ್ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಹೈವೇ ಪ್ಯಾಟ್ರೋಲಿಂಗ್ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಲು ಸೂಚಿಸಿದರು.
ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು. ಇಂಟೆಲಿಜೆಂಟ್ ಪೊಲೀಸರು ಎಚ್ಚರ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು. ಅದಕ್ಕೇ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಯಿತು. ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ. ಈ ಕೊಲೆ ತಪ್ಪಿಸಬಹುದಿತ್ತು. ಜನರಿಗೆ ಪೊಲೀಸ್ ಬಳಿ ಹೋದರೆ ನ್ಯಾಯ ಸಿಗುತ್ತದೆ ಎನ್ನುವ ಆತ್ಮ ವಿಶ್ವಾಸ ಹೆಚ್ಚಾಗಬೇಕು. ಶಾಂತಿ ಸಭೆಗಳನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ನಿಯಮಿತವಾಗಿ ನಡೆಸಲೇಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಈ ಕೆಳಗಿನ ತಂತ್ರಾಂಶ ಮತ್ತು ಕೈಪಿಡಿಗಳನ್ನು ಬಿಡುಗಡೆಗೊಳಿಸಲಾಯಿತು
*ಸೀನ್ ಆಫ್ ಕ್ರೈಂ ಕೈಪಿಡಿ
*ಸಂಚಯ: ಹೊಸ ಕ್ರಿಮಿನಲ್ ಕಾನೂನುಗಳ ಡಿಜಿಟಲ್ ತಂತ್ರಾಂಶ, ಆಪ್ ಬಿಡುಗಡೆ.
*ರಿಯಲ್ ಟೈಂ ಟ್ರಾಕಿಂಗ್ ಆಫ್ ಹೊಯ್ಸಳ ತಂತ್ರಾಂಶ
*ಬೆಂಗಳೂರು ಸಿಟಿ ಪೊಲೀಸ್- ಸೇಫ್ ಕನೆಕ್ಟ್ (ಕಮಾಂಡ್ ಸೆಂಡರ್ ಜೊತೆಗೆ ನೊಂದವರು ಆಡಿಯೊ, ವಿಡಿಯೊ ಕಾಲ್ ಮೂಲಕ ಸಂಪರ್ಕ ಸಾಧಿಸುವ ಸಾಧನ)
*ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ (ಸೈಬರ್ ಕ್ರೈಂ ಕೈಪಿಡಿ)
ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ