ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡ ನಿರ್ಮಾಣ ತಡೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ʼಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ವಿವರಿಸಿದರು.
ಅಧಿಕಾರಿಗಳ ಅಕ್ರಮ; ಗಮನಕ್ಕೆ ತರದೆಯೂ ಅಮಾನತು ಮಾಡಿ
“ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ” ಎಂದು ತಿಳಿಸಿದರು.
“ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ.50ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಶಾಸಕರು ನೀಡಿದ್ದಾರೆ” ಎಂದು ಹೇಳಿದರು.
GOOD NEWS: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಏಪ್ರಿಲ್’ನಿಂದ ಮನೆ ಬಾಗಿಲಿಗೆ ‘ಉಚಿತ ಖಾತೆ’ ವಿತರಣೆ