ಬೆಂಗಳೂರು : ರಾಜ್ಯದಲ್ಲಿ ಕಾಲುವೆಗಳಿಗೆ ಅಕ್ರಮ ಪಂಪ್ ಸೆಟ್ ಅಳವಡಿಕೆ ತೆಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಶೀಘ್ರವೇ ಇದೇ ಅಧಿವೇಶನದಲ್ಲಿ ಅಗತ್ಯ ಮಸೂದೆ ಮಂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸದನದಲ್ಲಿ ಜಮಖಂಡಿ ಸದಸ್ಯ ಜಗದೀಶ್ ಶಿವಣ್ಣ ಗುಡಗುಂಟಿ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ನೀರಾವರಿ ಯೋಜನೆಗಳಲ್ಲಿ ರೈತರು ಅಕ್ರಮವಾಗಿ ಕೆನಾಲ್‌ಗಳಿಗೆ ಪಂಪ್‌ಸೆಟ್ ಅಳವಡಿಸಿ ನೀರು ಎತ್ತುತ್ತಿರುವುದರಿಂದ ಯೋಜನೆಯ ಕೊನೆಯ ಭಾಗದ ಹಳ್ಳಿಗಳಿಗೆ ನೀರು ತಲುಪುತ್ತಿಲ್ಲ. ಇದನ್ನು ತಡೆಯಲು ಇದೇ ಅಧಿವೇಶನದಲ್ಲೇ ಅಗತ್ಯ ಮಸೂದೆ ಮಂಡಿಸಲಾಗುವುದು ಹೇಳಿದ್ದಾರೆ.
ಮಂಡ್ಯ, ಹಾಸನ, ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಕೊನೆಯ ಭಾಗಗಳಿಗೆ ನೀರು ತಲುಪುತ್ತಿಲ್ಲ. ಏತ ನೀರಾವರಿ ಮಾಡಿದರೂ ಸಹ ಶೇ .50 ರಷ್ಟು ನೀರು ಸಹ ಹೋಗುತ್ತಿಲ್ಲ. ಇದನ್ನು ತಡೆಯಲು ವಾರದೊಳಗೆ ಮಸೂದೆ ತಯಾರು ಮಾಡಿ ಮಂಡಿಸಲಾಗುವುದು ಎಂದರು.