ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳದ ಘೋಷಣೆ ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದಂತ ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರೋದಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಅಕ್ಟೋಬರ್ 20ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಅನುಮೋದನೆ ನೀಡಲಾಗುತ್ತಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿಯೇ ಅಕ್ಟೋಬರ್ 20ರಂದು ನಡೆಯಲಿರುವಂತ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಮಹತ್ವವನ್ನು ಪಡೆದಿದೆ. ಅದು ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಸಂಬಂಧದ ಕಡತಕ್ಕೆ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರೋದಕ್ಕೆ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಎಚ್ಚರ..ಪೋಷಕರೇ ಎಚ್ಚರ : ಮಕ್ಕಳನ್ನು ಆಡಲು ಬಿಡುವ ಮುನ್ನ ಈ ಸುದ್ದಿ ಓದಿ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿಯನ್ನು ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ.
BIG BREAKING NEWS: ಎಐಸಿಸಿ ಅಧ್ಯಕ್ಷರ ಆಯ್ಕೆ ಚುನಾವಣೆ ಮತದಾನ ಅಂತ್ಯ | Congress President Poll 2022