ಬೆಂಗಳೂರು: ಉಪ ನೋಂದಣಾಧಿಕಾರಿಗಳು ಹಾಗೂ ಹಿರಿಯ ನೋಂದಣಾಧಿಕಾರಿಗಳು ಮತ್ತು ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಗಳನ್ನು ಕೌನ್ಸೆಲಿಂಗ್ ಮೂಲಕ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕಂದಾಯ ಇಲಾಖೆಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ವರ್ಗಾವಣೆಗಳನ್ನು ಪಾರದರ್ಶಕವಾಗಿ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿತ್ತು.

ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಹೀಗಾಗಿ ಕಳೆದ 8 ವರ್ಷಗಳಲ್ಲಿ 5 ವರ್ಷ ಬೆಂಗಳೂರು ಸುತ್ತಮುತ್ತಲಿನ ಕಛೇರಿಗಳಲ್ಲಿ ಸೇವೆ ಸಲ್ಲಿಸಿರುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯ ಹೊರಗೆ 10 ನಗರ ಸಭೆಗಳ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಳೆದ 5 ವರ್ಷಗಳಲ್ಲಿ 4 ಅಥವಾ ಹೆಚ್ಚು ವರ್ಷಗಳ ಸೇವೆ ಸಲ್ಲಿಸಿರುವ ಎಲ್ಲಾ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳ ವರ್ಗಾವಣೆಗಳನ್ನು ಮತ್ತು ಇದೇ ರೀತಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ಪ್ರಥಮ ದರ್ಜೆ ಸಹಾಯಕರುಗಳನ್ನು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಅದಲ್ಲದೇ ದಿ:25.06.2024 ರಂದು ಹೊರಡಿಸಲಾದ ವರ್ಗಾವಣೆ ಮಾರ್ಗಸೂಚಿಗಳನ್ವಯ ಶೇಕಡಾವಾರು ವರ್ಗಾವಣೆ ಮಿತಿಯನ್ನು ಮತ್ತು ಅಂತಿಮ ದಿನಾಂಕವನ್ನು ಸಡಿಲಗೊಳಿಸಿ ಈ ವರ್ಗಾವಣೆಗಳನ್ನು ದಿ:10.08.2024 ರೊಳಗೆ ಪೂರ್ಣಗೊಳಿಸಲು ನಿರ್ಣಯಿಸಲಾಗಿದೆ.

• ರಾಜ್ಯದಲ್ಲಿ ಒಟ್ಟು 257 ಉಪ ನೋಂದಣಾಧಿಕಾರಿಗಳ ಕಛೇರಿಗಳಿವೆ.
• ಅವುಗಳಲ್ಲಿ 51 ಕಛೇರಿಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿವೆ.
• ಅಂದರೆ ಬಿ.ಎಮ್.ಆರ್.ಡಿ.ಎ ವ್ಯಾಪ್ತಿಯಲ್ಲಿವೆ.
• ಈ ಕಛೇರಿಗಳಲ್ಲಿ ಸೇವೆ ಸಲ್ಲಿಸುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಛೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳನ್ನು ಸಮಾಲೋಚನೆ ಅಂದರೆ ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲು ಪ್ರಸ್ತಾಪಿಸಲಾಗಿತ್ತು.

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

Share.
Exit mobile version