ಬೆಂಗಳೂರು: ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಅವರ ಸ್ಮಗ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಮಾಡಿತ್ತು. ಆದರೇ ಇದೀಗ ದಿಢೀರ್ ಬೆಳವಣಿಗೆ ಎನ್ನುವಂತೆ ನಟಿ ರನ್ಯಾ ರಾವ್ ಕೇಸ್ ನಲ್ಲಿ ಸಿಐಡಿ ತನಿಖೆಗೆ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವನ್ನು ಎಸಿಎಸ್ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ನಟಿ ರನ್ಯಾ ರಾವ್ ಅವರ ಸ್ಮಗ್ಲಿಂಗ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದನ್ನು ವಾಪಾಸ್ ಪಡೆದಿದೆ.
ಅಂದಹಾಗೇ ನಟಿ ರನ್ಯಾ ರಾವ್ ಅವರು ಅಕ್ರಮವಾಗಿ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಬರೋಬ್ಬರಿ 14 ಕೆಜಿ ಚಿನ್ನ ಕಳ್ಳಸಾಗಾಣಿಕೆ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದರು. ನ್ಯಾಯಾಂಗ ಬಂಧನದಲ್ಲಿರುವಂತ ಅವರು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
‘ವಿಧಾನ ಪರಿಷತ್ತಿ’ನಲ್ಲೂ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ಕ್ಕೆ ಅಂಗೀಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :ರೈಲ್ವೆಯಲ್ಲಿ 1,003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Jobs Alert