ಬೆಂಗಳೂರು: ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಲಾಗಿತ್ತು. ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೇ, ರಾಜ್ಯ ಸರ್ಕಾರ ಈ ಆದೇಶವನ್ನು ವಾಪಾಸ್ ಪಡೆದಿದೆ.
ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಹಿಂಪಡೆದ ಆದೇಶ ಮಾಡಲಾಗಿದ್ದು, ವಸತಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ಹೇರಿದ್ದ ನಿರ್ಬಂಧದ ಆದೇಶವನ್ನು ವಾಪಾಸ್ ಪಡೆದಿರೋದಾಗಿ ತಿಳಿಸಿದೆ.
ಈ ಹಿಂದೆ ಏನು ಆದೇಶ ಮಾಡಿತ್ತು.?
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿತ್ತು.
ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ. ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ ಆಚರಿಸದಂತೆ ಸೂಚಿಸಲಾಗಿತ್ತು.
ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಿದ್ರೇ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿತ್ತು.
ಅಂದಹಾಗೇ ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ, ಯುಗಾದಿ, ರಂಜಾನ್ ಸೇರಿದಂತೆ ವಿವಿಧ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂಬುದಾಗಿ ಸುತ್ತೋಲೆಯ ಆದೇಶದಲ್ಲಿ ತಿಳಿಸಲಾಗಿತ್ತು.
ಇದೀಗ ಈ ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಾಸ್ ಪಡೆಯಲಾಗಿದೆ. ಈ ಮೂಲಕ ವಿವಾದಕ್ಕೆ ಬ್ರೇಕ್ ಹಾಕಲಾಗಿದೆ.
‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿದೆ ‘ರಾಜ್ಯ ಸರ್ಕಾರ’ದಿಂದ ಮಾನ್ಯತೆ ಪಡೆದ ‘ಖಾಸಗಿ ಆಸ್ಪತ್ರೆ’ಗಳ ಪಟ್ಟಿ