ಮಂಡ್ಯ: ಇಂದು ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವ ಹಾಗೂ ಶ್ರೀರಂಗಪಟ್ಟಣ ದಸರಾ ಉತ್ಸವದ ಅಂಗವಾಗಿ ವಿಶ್ವಪ್ರಸಿದ್ದ ಕೃಷ್ಣರಾಜ ಸಾಗರ ಜಲಾಶಯ ಹಾಗೂ ಬೃಂದಾವನದ ದೀಪಾಲಂಕಾರವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಉದ್ಘಾಟಿಸಿದರು.
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಿದರು. ಈ ಬಳಿಕ ರಾಜ್ಯದ ವಿವಿಧೆಡೆ ದಸರಾ ಉತ್ಸವಕ್ಕೆ ಚಾಲನೆ ದೊರೆತಿದೆ. ಇತ್ತ ಶ್ರೀ ರಂಗಪಟ್ಟಣ ಉತ್ಸವದ ಅಂಗವಾಗಿ ವಿಶ್ವ ಪ್ರಸಿದ್ಧ ಕೆ ಆರ್ ಎಸ್ ಜಲಾಶಯ ಹಾಗೂ ಬೃಂದಾವನದ ದೀಪಾಲಾಂಕರವನ್ನು ಎಂಎಲ್ಸಿ ದಿನೇಶ್ ಗೂಳಿಗೌಡ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ.ರಾಮ್ ಪ್ರಸಾದ್ ಮನೋಹರ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುರಾಮ್, ಎಕ್ಸಿಕ್ಯುಟಿವ್ ಇಂಜಿನಿಯರ್ ಜಯಂತ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.
ನವದುರ್ಗೆಯರಲ್ಲಿದೆ ನವಗ್ರಹ ಭಾವ: ಜಗನ್ಮಾತೆಯ ಕೃಪೆಗೆ ಪಾತ್ರರಾಗಲು ಹೀಗೆ ಪೂಜಿಸಿ
Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ