ಶಿವಮೊಗ್ಗ: ಜಿಲ್ಲೆಯ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ವಿಭಾಗದಲ್ಲಿ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಚೈತನ್ಯ ಸಂಸ್ಥೆ ಹಾಗೂ ಕಲಾ ವಿಭಾಗ ಕ್ಷೇತ್ರದಲ್ಲಿ ಗೋಪಾಲಗೌಡ ಬಡಾವಣೆಯ ಕಲಾರ್ಪಣಂ ಸ್ಕೂಲ್ ಆಫ್ ಆಟ್ರ್ಸ್‍ನ ಸಿಂಧು ಎಸ್ ಇವರು 2023-24 ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
ಮಾ.12 ರಂದು ಬೆಂಗಳೂರಿನ ಜವಾಹರ್ ಬಾಲಭವನ ಕಬ್ಬನ್ ಉದ್ಯಾನವನ ಇಲ್ಲಿ ನಡೆದ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಪ್ರಶಸ್ತಿ ಪ್ರದಾನ ಮಾಡಿದರು. ಜಿಲ್ಲೆಯ ಪ್ರಶಸ್ತಿ ಪುರಸ್ಕøತರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಅಭಿನಂದಿಸಿದ್ದಾರೆ.