ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಪ್ಲೋಮಾ, ಪದವೀಧರರಿಗೆ ಯುವನಿಧಿ ಜಾರಿಗೊಳಿಸಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅದೇ ರಾಜ್ಯ ಮಟ್ಟದ ಬೃಹತ್ ಉದ್ಯೋ ಮೇಳವನ್ನು ಫೆಬ್ರವರಿ.19, 20ರಂದು ಆಯೋಜಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ-2024ಅನ್ನು ದಿನಾಂಕ 19-02-2024 ಮತ್ತು 20-02-2024ರಂದು ಆಯೋಜಿಸಲಾಗುತ್ತಿದೆ ಎಂದಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಫೆ.19, 20 ರಂದು ಆಯೋಜಿಸಲಾಗುತ್ತಿದ್ದು, ಅಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ https://udyogamela.skillconnect.kaushalkar.com/candidateRegistration ಲಿಂಕ್ ಮೂಲಕ ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ.
ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಬಹುದು. ಫೆ.19, 20 ರಂದು ನಡೆಯುವಂತ ಬೃಹತ್ ಉದ್ಯೋಗ ಮೇಳದಲ್ಲಿ ಭಾಗಿಯಾಗಿ, ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 18005999918 ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದಿದೆ.
ಬೆಂಗಳೂರಲ್ಲಿ ಮತ್ತೊಂದು ಭೀಕರ ಅವಘಡ: ‘ಶ್ರೀರಾಮನ ಕಟೌಟ್’ ಮುರಿದು ಬಿದ್ದು ಮೂವರಿಗೆ ಗಾಯ
BREAKING : ಮೆಟ್ರೋ ಪ್ರಯಾಣಿಕರೇ ಹುಷಾರ್ : ಇನ್ನುಮುಂದೆ ಅಸಭ್ಯ ವರ್ತನೆ ತೋರಿದರೆ ಬೀಳುತ್ತೆ ದಂಡ