ಚಿಕ್ಕಬಳ್ಳಾಪುರ: ಲಾರಿಯೊಂದಕ್ಕೆ ಕೆಮಿಕಲ್ ಡಂಪ್ ಮಾಡುತ್ತಿದ್ದಂತ ವೇಳೆಯಲ್ಲಿ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಶ್ರೀನಿವಾಸಮೂರ್ತಿ ಎಂಬುವರಿಗೆ ಸೇರಿದಂತ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ನಡೆದಂತ ಘಟನೆ, ಇಂದು ತಡವಾಗಿ ಬೆಳಕಿಗೆ ಬಂದಿದೆ. ಲಾರಿಯೊಂದರ ಮೇಲ್ಭಾಗದ ಟ್ಯಾಂಕ್ ಕ್ಯಾಪ್ ತೆರೆದು ಕೆಮಿಲಕ್ ಡಂಪ್ ಮಾಡುವಂತ ಸಂದರ್ಭದಲ್ಲಿ ಉಸಿರು ಗಟ್ಟಿ ಬಿಹಾರ ಮೂಲಕ ಮಹಮ್ಮದ್ ರಜಿಕ್ಶ್ರ(33) ಎಂಬಾತ ಸಾವನ್ನಪ್ಪಿದ್ದಾನೆ.
ಇನ್ನೂ ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥ ಮತ್ತೋರ್ವ ಕಾರ್ಮಿಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಿನ್ನೆ ರಾತ್ರಿ ನಡೆದಿರುವಂತ ಘಟನೆ ಇದಾಗಿದೆ. ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇಷ್ಟೆಲ್ಲಾ ನಡೆದರೂ ಕಾರ್ಮಿಕ ಇಲಾಖೆಗೆ ಮಾಹಿತಿಯನ್ನು ಮಾಲೀಕ ನೀಡಿಲ್ಲ ಎನ್ನಲಾಗುತ್ತಿದೆ. ಅಲ್ಲದೇ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದಕ್ಕೆ ಕಾರ್ಮಿಕರು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ