Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

Watch Video: ಇಸ್ರೇಲ್ ವಾಯುದಾಳಿ: ಇರಾನ್‌ನ ಪ್ರಯಾಣಿಕ ವಿಮಾನ ಭಸ್ಮ, ವೈರಲ್ ವೀಡಿಯೋ ಇಲ್ಲಿದೆ

03/03/2026 10:09 PM

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡ್ರಗ್ಸ್ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆಯಿಂದ ಸಮರ: ಗೃಹ ಸಚಿವ ಡಾ.ಜಿ.ಪರಮೇಶ್ವರ
KARNATAKA

ಡ್ರಗ್ಸ್ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆಯಿಂದ ಸಮರ: ಗೃಹ ಸಚಿವ ಡಾ.ಜಿ.ಪರಮೇಶ್ವರ

By kannadanewsnow0911/12/2025 4:29 PM

ಬೆಳಗಾವಿ ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ.

ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ.

ರಾಜ್ಯದ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ ಎಂಬ ಅಂಶಗಳ, ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ.

ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಮತ್ತು ಜಾಲ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ಬೀಟ್ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರತಿ ತಿಂಗಳು ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಶಯಾಸ್ಪದ ಹೈ ಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್ ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ.

ಪ್ರತಿ ಮಾಹೆಯಲ್ಲಿ ಜಿಲ್ಲಾ ಮಟ್ಟದ ಎನ್ ಸಿ ಒ ಆರ್ ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26 ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ. ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಗೃಹ ಸಚಿವರು ವಿವರಿಸಿದರು.

ಇಂದು ವಿಧಾನಸಭೆಯಲ್ಲಿ ಈ ವಿಧೇಯಕಗಳ ಮಂಡನೆ, ಪ್ರಸ್ತಾವನೆ ಅಂಗೀಕಾರ

ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!

Share. Facebook Twitter LinkedIn WhatsApp Email

Related Posts

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM2 Mins Read

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM2 Mins Read

ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ

03/03/2026 9:53 PM2 Mins Read
Recent News

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

Watch Video: ಇಸ್ರೇಲ್ ವಾಯುದಾಳಿ: ಇರಾನ್‌ನ ಪ್ರಯಾಣಿಕ ವಿಮಾನ ಭಸ್ಮ, ವೈರಲ್ ವೀಡಿಯೋ ಇಲ್ಲಿದೆ

03/03/2026 10:09 PM

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್, ರೈಲ್ವೆಯಲ್ಲಿ ಖಾಲಿಯಿರುವ 22,195 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ವಿಸ್ತರಣೆ!

03/03/2026 9:54 PM
State News
KARNATAKA

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

By kannadanewsnow0903/03/2026 10:11 PM KARNATAKA 2 Mins Read

ಮಂಡ್ಯ : ಜೀವನದಲ್ಲಿ ಛಲ, ಶಿಸ್ತು ಮತ್ತು ಸಂಯಮ ಮೈಗೂಡಿಸಿಕೊಂಡ ವ್ಯಕ್ತಿ ಮಾತ್ರ ಮೇರು ಸಾಧನೆ ಮಾಡಲು ಸಾಧ್ಯ ಎಂದು…

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM

ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ

03/03/2026 9:53 PM

ಬೆಂಗಳೂರಿನ ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ: ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ

03/03/2026 9:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.