ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್, ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೊತ್ತರ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜ.10 ರ ವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರAಶದ https;//shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8277799990 (24×7) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಹೊಸ ವರ್ಷದ ದಿನವೇ ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಯುಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ
ಜ.5ರಂದು ಸಾಗರದಲ್ಲಿ ‘ಸಾಗರೋತ್ಸವ-2025’: ಭೂಮಣ್ಣಿ ಬುಟ್ಟಿ ಸ್ಪರ್ಧೆ, ಪವಾಡ ಬಯಲು ಕಾರ್ಯಕ್ರಮ ಆಯೋಜನೆ