ವಸಂತ ಬಿ ಈಶ್ವರಗೆರೆ
ಬೆಂಗಳೂರು: 2023ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 30 ಸರ್ಕಾರಿ ಅಧಿಕಾರಿ, ನೌಕರರಿಗೆ ಪ್ರಶಸ್ತಿಯನ್ನು ನೀಡಿ ಸರ್ಕಾರ ಗೌರವಿಸುತ್ತಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖಎಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಅತ್ಯುನ್ನತ ಸೇವೆಗೈದ, ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದಿದ್ದಾರೆ.
ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಳ ಸಂಖ್ಯೆಯನ್ನು 30ಕ್ಕೆ ಏರಿಸಲಾಗಿದೆ. ಅಲ್ಲದೇ ದಿನಾಂಕ 19-04-2022ರ ಆದೇಶದಲ್ಲಿ ಜಿಲ್ಲಾ ಪ್ರಶಸ್ತಿ ಮೊತ್ತವನ್ನು ರೂ.10,000ದಿಂದ 25,000ಕ್ಕೆ ಹಾಗೂ ರಾಜ್ಯ ಪ್ರಶಸ್ತಿಯ ಮೊತ್ತವನ್ನು ರೂ.25,000ದಿಂದ ರೂ.50,000ಕ್ಕೆ ಏರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಪೋತ್ತಮ ಸೇವಾ ಪ್ರಶಸ್ತಿಗೆ ಆನ್ ಲೈನ್ ಮುಖಾಂತರ ಸ್ವತಹ ನಾಮನಿರ್ದೇಶನ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಪರ ಮುಖ್ಯ ಕಾರ್ಯದರ್ಶಿಗಳ ಆಯ್ಕೆ ಸಮಿತಿ ಸಭೆಯು ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಸಲ್ಲಿಸಿರುವ ಎಲ್ಲಾ ಅರ್ಹ ನಾಮನಿರ್ದೇಶನಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅಂತಿಮವಾಗಿ 30 ಅರ್ಹ ಅಧಿಕಾರಿ, ನೌಕರರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ ಎಂಬುದಾಗಿ ಹೇಳಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತನ್ನತ ಸೇವೆಗೌದ, ಸಾಧನೆಗೈದ ಕೆಳಕಂಡ 30 ಅಧಿಕಾರಿ, ನೌಕರರಿಗೆ 2023ನೇ ಸಾಲಿನ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುವುದು. ಪ್ರತಿ ಪುರಸ್ಕೃತರನ್ನು ರೂ.50,000 ಪ್ರಶಸ್ತಿ ಮೊತ್ತ, ಪ್ರಶಸ್ತಿ ಫಲಕ, ಹಾರ, ಶಾಲುಗಳನೊಂದಿಗೆ ಗೌರವಿಸಲಾಗುವುದು ಎಂದಿದೆ.
ಹೀಗಿದೆ 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಗೊಂಡವ ಪಟ್ಟಿ
ಜಾತಿ ಗಣತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ
Online Scam: ನಕಲಿ ವೆಬ್ಸೈಟ್ ಲಿಂಕ್ ಗಳ ಬಗ್ಗೆ ಜಾಗರೂಕರಾಗಿರಲು ಪ್ರವಾಸಿಗರಿಗೆ ಕೇಂದ್ರ ಸರ್ಕಾರ ಸೂಚನೆ