ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಚ್.2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಂಡಳಿಯ ನಿರ್ದೇಶಕರು, ದಿನಾಂಕ: 01.03.2024 ರಿಂದ 18.03.2024 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರ (Scheme of Evaluation) ಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ: 20.03.2024 ರಿಂದ ದಿನಾಂಕ: 22.03.2024 ರವರೆಗೆ ನಡೆಯಲಿರುವ ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು/ಪೋಷಕರುಗಳು ಈ ಕೆಳಗಿನ ಅಂಶಗಳಿಗೆ ಮಾತ್ರ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
1) ದ್ವಂದ್ವಾರ್ಥ ಬರುವ ಪ್ರಶ್ನೆಗಳಿಗೆ
2) ಅಪೂರ್ಣ ಪ್ರಶ್ನೆಗಳಿಗೆ
3) ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು.
4) ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂತದ್ದು
5) ಒಂದು ಆಯ್ಕೆಗಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳು
ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 19.03.2024 21.03.2024 ರ ಸಂಜೆ 5.00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ:21.03.2024 ರ ಸಂಜೆ 5.00 ಗಂಟೆಯ ನಂತರ ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಈ ಕೆಳಗಿನ ಲಿಂಕ್ ಬಳಸಿ ಆಕ್ಷೇಪಣೆಗಳನ್ನು ಸಲ್ಲಿಸುವುದು.
ಮಂಡಲಿಯ ವೆಬ್ ಸೈಟ್ ವಿಳಾಸ : https://kseab.karnataka.gov.in/- Latest News → Click here for filing objections for II PUC Examination -1 March 2024 Scheme of Evaluation ಎಂದು ತಿಳಿಸಿದ್ದಾರೆ.
ಮಿಸ್ಟರ್ ಡಿ.ಕೆ.ಶಿವಕುಮಾರ್, ಇವತ್ತು ‘ಜೆಡಿಎಸ್-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ