ಬೆಂಗಳೂರು: 2013-18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೇ ಹಲವು ಪ್ರಶಸ್ತಿ ನೀಡಿತ್ತು. ಇಡೀ ದೇಶದಲ್ಲಿಯೇ ಅತ್ಯುತ್ತಮ ಸರ್ಕಾರಿ ಸಾರಿಗೆ ( KSRTC ) ಎಂದು ಗುರುತಿಸಲ್ಪಟ್ಟಿದ್ದ ರಾಜ್ಯದ ಸಾರಿಗೆ ವ್ಯವಸ್ಥೆ ಇಂದು ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಅವ್ಯವಸ್ಥೆಯ ಆಗರವಾಗಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ಕಿಡಿಕಾರಿದ್ದಾರೆ.
2013-18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೇ ಹಲವು ಪ್ರಶಸ್ತಿ ನೀಡಿತ್ತು. ಇಡೀ ದೇಶದಲ್ಲಿಯೇ ಅತ್ಯುತ್ತಮ ಸರ್ಕಾರಿ ಸಾರಿಗೆ ಎಂದು ಗುರುತಿಸಲ್ಪಟ್ಟಿದ್ದ ರಾಜ್ಯದ ಸಾರಿಗೆ ವ್ಯವಸ್ಥೆ ಇಂದು @BJP4Karnataka ಸರ್ಕಾರದ ದುರಾಡಳಿತದಿಂದಾಗಿ ಅವ್ಯವಸ್ಥೆಯ ಆಗರವಾಗಿದೆ. 2/13#KSRTC
— Siddaramaiah (@siddaramaiah) July 1, 2022
ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವಂತ ಅವರು, ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25 ರೂ. ಹಣ ವಸೂಲಿ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ. ಈ ಹಗಲು ದರೋಡೆಯನ್ನು ಕೂಡಲೇ ನಿಲ್ಲಿಸುವಂತೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದಿದ್ದಾರೆ.
ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25 ರೂ. ಹಣ ವಸೂಲಿ ಮಾಡುತ್ತಿರುವ ಕೇಂದ್ರ @BJP4India ಸರ್ಕಾರದ ಕ್ರಮ ಖಂಡನೀಯ.
ಈ ಹಗಲು ದರೋಡೆಯನ್ನು ಕೂಡಲೇ ನಿಲ್ಲಿಸುವಂತೆ ರಾಜ್ಯ @BJP4Karnataka ಸರ್ಕಾರ ಮತ್ತು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು. 1/13#KSRTC— Siddaramaiah (@siddaramaiah) July 1, 2022
ರಾಜ್ಯದ ಕೆಎಸ್ಆರ್ಟಿಸಿಯ 3 ನಿಗಮಗಳು ಹಾಗೂ ಬಿಎಂಟಿಸಿಯಲ್ಲಿ ಸುಮಾರು 26 ಸಾವಿರ ಬಸ್ ಗಳಿವೆ. ಪ್ರತಿ ದಿನ ಲಕ್ಷಾಂತರ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು 1,30,000 ನೌಕರರಿಗೆ ಇವು ಉದ್ಯೋಗ ನೀಡಿವೆ ಎಂದು ಹೇಳಿದ್ದಾರೆ.
ರಾಜ್ಯದ ಕೆಎಸ್ಆರ್ಟಿಸಿಯ 3 ನಿಗಮಗಳು ಹಾಗೂ ಬಿಎಂಟಿಸಿಯಲ್ಲಿ ಸುಮಾರು 26 ಸಾವಿರ ಬಸ್ ಗಳಿವೆ. ಪ್ರತಿ ದಿನ ಲಕ್ಷಾಂತರ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು 1,30,000 ನೌಕರರಿಗೆ ಇವು ಉದ್ಯೋಗ ನೀಡಿವೆ. 3/13#KSRTC
— Siddaramaiah (@siddaramaiah) July 1, 2022
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ನಿತ್ಯ ಸುಮಾರು 20-25 ಕೋಟಿ ರೂ. ಆದಾಯವಿದ್ದರೂ ಬಿಜೆಪಿ ಸರ್ಕಾರವು ಸಮರ್ಥವಾಗಿ ಸಾರಿಗೆ ವ್ಯವಸ್ಥೆಯನ್ನು ನಿಭಾಯಿಸಲು ವಿಫಲವಾದ ಕಾರಣ ಇಂದು ಇವು ನಷ್ಟದ ಹಾದಿಯಲ್ಲಿವೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ನಿತ್ಯ ಸುಮಾರು 20-25 ಕೋಟಿ ರೂ. ಆದಾಯವಿದ್ದರೂ @BJP4Karnataka ಸರ್ಕಾರವು ಸಮರ್ಥವಾಗಿ ಸಾರಿಗೆ ವ್ಯವಸ್ಥೆಯನ್ನು ನಿಭಾಯಿಸಲು ವಿಫಲವಾದ ಕಾರಣ ಇಂದು ಇವು ನಷ್ಟದ ಹಾದಿಯಲ್ಲಿವೆ. 4/13#KSRTC
— Siddaramaiah (@siddaramaiah) July 1, 2022
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈ ನಿಗಮಗಳು ಖರೀದಿಸುವ ಪ್ರತಿ ಲೀಟರ್ ಡೀಸೆಲ್ ಮೇಲೆ ಖಾಸಗಿಯವರಿಗಿಂತ 25 ರೂ. ಹೆಚ್ಚು ಸಂಗ್ರಹಿಸುತ್ತಿದೆ. ಬಲ್ಕ್ ಆಗಿ ಖರೀದಿಸುವವರು ಪ್ರತಿ ಲೀಟರ್ ಮೇಲೆ 25 ರೂ.ಗಳನ್ನು ಹೆಚ್ಚು ಪಾವತಿಸಬೇಕು ಎಂಬ ನಿಯಮದಿಂದಾಗಿ ಈ ಸಮಸ್ಯೆ ಬಂದೊದಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ @narendramodi ಅವರ ಸರ್ಕಾರ ಈ ನಿಗಮಗಳು ಖರೀದಿಸುವ ಪ್ರತಿ ಲೀಟರ್ ಡೀಸೆಲ್ ಮೇಲೆ ಖಾಸಗಿಯವರಿಗಿಂತ 25 ರೂ. ಹೆಚ್ಚು ಸಂಗ್ರಹಿಸುತ್ತಿದೆ. ಬಲ್ಕ್ ಆಗಿ ಖರೀದಿಸುವವರು ಪ್ರತಿ ಲೀಟರ್ ಮೇಲೆ 25 ರೂ.ಗಳನ್ನು ಹೆಚ್ಚು ಪಾವತಿಸಬೇಕು ಎಂಬ ನಿಯಮದಿಂದಾಗಿ ಈ ಸಮಸ್ಯೆ ಬಂದೊದಗಿದೆ. 5/13#KSRTC
— Siddaramaiah (@siddaramaiah) July 1, 2022
ಖಾಸಗಿಯವರಿಗೆ ಪ್ರತಿ ಲೀಟರ್ ಡೀಸೆಲ್ 88 ರೂಪಾಯಿಗೆ ಲಭಿಸಿದರೆ, ಸರ್ಕಾರದ ನಿಗಮಗಳು 113 ರೂ. ಪಾವತಿಸಬೇಕಾಗಿದೆ. ಇದು ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಜನ ಸಾಮಾನ್ಯರ ಸಾರಿಗೆಗೆ ಮಾಡುತ್ತಿರುವ ಅನ್ಯಾಯ ಎಂದು ವಾಗ್ಧಾಳಿ ನಡೆಸಿದ್ದಾರೆ.
ಖಾಸಗಿಯವರಿಗೆ ಪ್ರತಿ ಲೀಟರ್ ಡೀಸೆಲ್ 88 ರೂಪಾಯಿಗೆ ಲಭಿಸಿದರೆ, ಸರ್ಕಾರದ ನಿಗಮಗಳು 113 ರೂ. ಪಾವತಿಸಬೇಕಾಗಿದೆ. ಇದು @narendramodi ಯವರ @BJP4India ಸರ್ಕಾರ ಜನ ಸಾಮಾನ್ಯರ ಸಾರಿಗೆಗೆ ಮಾಡುತ್ತಿರುವ ಅನ್ಯಾಯ. 6/13#KSRTC
— Siddaramaiah (@siddaramaiah) July 1, 2022
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ಸುಗಳು ಪ್ರತಿ ದಿನ ಸುಮಾರು 13 ಲಕ್ಷ ಲೀಟರ್ ಡೀಸೆಲ್ ಬಳಸುತ್ತವೆ. ಲೀಟರ್ ಮೇಲೆ 25 ರೂ. ಹೆಚ್ಚಿಗೆ ಪಾವತಿಸಬೇಕಾಗಿರುವುದರಿಂದ ಪ್ರತಿ ದಿನ 3.25 ಕೋಟಿ ರೂಪಾಯಿಗಳನ್ನು, ವರ್ಷಕ್ಕೆ 1,187 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ಸುಗಳು ಪ್ರತಿ ದಿನ ಸುಮಾರು 13 ಲಕ್ಷ ಲೀಟರ್ ಡೀಸೆಲ್ ಬಳಸುತ್ತವೆ. ಲೀಟರ್ ಮೇಲೆ 25 ರೂ. ಹೆಚ್ಚಿಗೆ ಪಾವತಿಸಬೇಕಾಗಿರುವುದರಿಂದ ಪ್ರತಿ ದಿನ 3.25 ಕೋಟಿ ರೂಪಾಯಿಗಳನ್ನು, ವರ್ಷಕ್ಕೆ 1,187 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗಿದೆ. 7/13#KSRTC
— Siddaramaiah (@siddaramaiah) July 1, 2022
ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ. ಈ ನೌಕರರು ರಾಜ್ಯದ ಇತರೆ ಸರ್ಕಾರಿ ನೌಕರರು ಪಡೆಯುತ್ತಿರುವ ವೇತನಗಳಿಗಿಂತ ಶೇ.40 ರಷ್ಟು ಕಡಿಮೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ. ಈ ನೌಕರರು ರಾಜ್ಯದ ಇತರೆ ಸರ್ಕಾರಿ ನೌಕರರು ಪಡೆಯುತ್ತಿರುವ ವೇತನಗಳಿಗಿಂತ ಶೇ.40 ರಷ್ಟು ಕಡಿಮೆ ಪಡೆಯುತ್ತಿದ್ದಾರೆ. 8/13#KSRTC
— Siddaramaiah (@siddaramaiah) July 1, 2022
ಸಾರಿಗೆ ಸಂಸ್ಥೆಯ ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಈ ಶೋಷಣೆಯನ್ನು ವಿರೋಧಿಸಿ ಕಳೆದ ವರ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆಂದು ವಜಾ ಮಾಡಿದ್ದ ಸಿಬ್ಬಂದಿಗಳಲ್ಲಿ 1,500 ಜನರನ್ನು ಇದುವರೆಗೂ ಕೆಲಸಕ್ಕೆ ಸೇರಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸಾರಿಗೆ ಸಂಸ್ಥೆಯ ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸಲಾಗುತ್ತಿದೆ. @BJP4Karnataka ಸರ್ಕಾರದ ಈ ಶೋಷಣೆಯನ್ನು ವಿರೋಧಿಸಿ ಕಳೆದ ವರ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆಂದು ವಜಾ ಮಾಡಿದ್ದ ಸಿಬ್ಬಂದಿಗಳಲ್ಲಿ 1,500 ಜನರನ್ನು ಇದುವರೆಗೂ ಕೆಲಸಕ್ಕೆ ಸೇರಿಸಿಕೊಂಡಿಲ್ಲ. 9/13#KSRTC
— Siddaramaiah (@siddaramaiah) July 1, 2022
ಈಗ ಲಭ್ಯವಿರುವ ಇಂಧನ ಕೇವಲ 3-4 ದಿನಕ್ಕೆ ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆ ನಂತರ ಏನು ಮಾಡಬೇಕೆಂಬ ಬಗ್ಗೆ ಬಿಜೆಪಿ ಸರ್ಕಾರಕ್ಕೂ ತಿಳಿದಿಲ್ಲ. ಇದನ್ನೆಲ್ಲ ನೋಡಿದರೆ ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಸಿದ್ಧತೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈಗ ಲಭ್ಯವಿರುವ ಇಂಧನ ಕೇವಲ 3-4 ದಿನಕ್ಕೆ ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆ ನಂತರ ಏನು ಮಾಡಬೇಕೆಂಬ ಬಗ್ಗೆ @BJP4Karnataka ಸರ್ಕಾರಕ್ಕೂ ತಿಳಿದಿಲ್ಲ. ಇದನ್ನೆಲ್ಲ ನೋಡಿದರೆ ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಸಿದ್ಧತೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. 10/13#KSRTC
— Siddaramaiah (@siddaramaiah) July 1, 2022
ಸರ್ಕಾರಿ ಬಸ್ಸುಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ವಿತರಿಸಬೇಕಾದ ಹಾಗೂ ಡೀಸೆಲ್ ಮೇಲೆ ತೆರಿಗೆ ಮನ್ನಾ ಮಾಡಬೇಕಾದ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ಜನರನ್ನು ಸುಲಿಗೆ ಮಾಡಲು ನಿಂತಿವೆ. ಜನಪರವಾದ ಸರ್ಕಾರ ಮಾಡುವ ಕೆಲಸವೆ ಇದು? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಬಸ್ಸುಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ವಿತರಿಸಬೇಕಾದ ಹಾಗೂ ಡೀಸೆಲ್ ಮೇಲೆ ತೆರಿಗೆ ಮನ್ನಾ ಮಾಡಬೇಕಾದ @narendramodi ಮತ್ತು @BSBommai ಯವರ @BJP4Karnataka ಸರ್ಕಾರ ಜನರನ್ನು ಸುಲಿಗೆ ಮಾಡಲು ನಿಂತಿವೆ.
ಜನಪರವಾದ ಸರ್ಕಾರ ಮಾಡುವ ಕೆಲಸವೆ ಇದು? 11/13#KSRTC— Siddaramaiah (@siddaramaiah) July 1, 2022
ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು. ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು. ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು @BJP4Karnataka ಸರ್ಕಾರವನ್ನು ಒತ್ತಾಯಿಸುತ್ತೇನೆ. 12/13#KSRTC
— Siddaramaiah (@siddaramaiah) July 1, 2022
ಹೆದ್ದಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶುಲ್ಕ ವಸೂಲಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಹಾಗೂ ವಿದ್ಯಾರ್ಥಿ, ಕಾರ್ಮಿಕ ಹಾಗೂ ಇತರೆ ಎಲ್ಲಾ ಜನ ಸಾಮಾನ್ಯರಿಗೆ ಉತ್ತಮ ಸಾರಿಗೆ ಸೇವೆಯನ್ನು ಕಡಿಮೆ ದರದಲ್ಲಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ಹೆದ್ದಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶುಲ್ಕ ವಸೂಲಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಹಾಗೂ ವಿದ್ಯಾರ್ಥಿ, ಕಾರ್ಮಿಕ ಹಾಗೂ ಇತರೆ ಎಲ್ಲಾ ಜನ ಸಾಮಾನ್ಯರಿಗೆ ಉತ್ತಮ ಸಾರಿಗೆ ಸೇವೆಯನ್ನು ಕಡಿಮೆ ದರದಲ್ಲಿ ನೀಡಬೇಕೆಂದು ಆಗ್ರಹಿಸುತ್ತೇನೆ. 13/13#KSRTC
— Siddaramaiah (@siddaramaiah) July 1, 2022