ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಏಪ್ರಿಲ್.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಇದೇ ವೇಳೆಯಲ್ಲಿ ರಾಜ್ಯ ಒಕ್ಕಲಿಗರ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ.
ರಾಜ್ಯ ಒಕ್ಕಲಿಗರ ಸಮುದಾಯಗಳ ಒಕ್ಕೂಟದಿಂದ ನೆನ್ನೆ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಅವರು ಒಕ್ಕಲಿಗ ಸಮುದಾಯದ ಸಂಘಕ್ಕೆ ಜಮೀನು ಕೊಟ್ಟಿದ್ದು, ಆದಿಚುಂಚನಗಿರಿ ವೈದ್ಯಕೀ, ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ, ಈಗಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 10 ಎಕರೆ ಜಮೀನು ಮಂಜೂರು ಮಾಡಿಸಿಕೊಟ್ಟಿದ್ದಾರೆ. ಸಮುದಾಯ ಮಠ, ಶಿಕ್ಷಣ ಸಂಸ್ಥೆಗಳಿಗೆ ಹಲವು ಕೊಡುಗೆ ನೀಡಿ ಸಮುದಾಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ಶ್ರಮಿಸಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರೆ ನೀಡಿದರು.
ದೇವೆಗೌಡರಿಂದಒಕ್ಕಲಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಅಪ್ಪ ಮಕ್ಕಳು ಮೋಸ ಮಾಡುತ್ತಕೇ ಇದ್ದಾರೆ, ಸಮುದಾಯಕ್ಕೆ ಮತ್ತೊಂದು ಮಠ ಸ್ಥಾಪಿಸಿದರು. ಎಚ್.ಎನ್ ನಂಜೇಗೌಡ, ಭೈರೇಗೌಡ, ಅಂಬರಿಶ್ ಸೇರಿದಂತೆ ಹಲವು ಒಕ್ಕಲಿಗೆ ನಾಯಕರನ್ನು ಜೆಡಿಎಸ್ ನಿಂದ ಹೊರಹಾಕಿದರು. ಹೊಸ ನಾಯಕತ್ವ ಸೃಷ್ಟಿಯಾಗಬೇಕು,ಅದರಿಂದ ಒಕ್ಕಲಿಗ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದೆ.
ಪತ್ರಿಕಾಗೋಷ್ಟಿಯಲ್ಲಿ ಪ್ರೊ.ಕೃಷ್ಣೇಗೌಡ, ಯಕುವನಹಳ್ಳಿ ರಮೇಶ್, ಮೋಹನ್ ಕುಮಾರ್ ಮತ್ತಿತರರು ಹಾಜರಿದ್ದರು.