ಬೆಂಗಳೂರು : ಮಹಿಳೆಯರ ಘನತೆ ಚಾರಿತ್ರ್ಯಕ್ಕೆ ಧಕ್ಕೆ ಆರೋಪದಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಲಾಗಿದೆ.
ಈ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದು, ರಾಜಕೀಯ ಲಾಭಕ್ಕಾಗಿ ಹೆಣ್ಣುಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಗೆ ಅವರು ಉತ್ತರ ನೀಡಬೇಕು. ತಪ್ಪು ಸಾಬೀತಾದ್ರೆ ಜೈಲು ಶಿಕ್ಷೆಯಾಗುತ್ತದೆ ಎಂದು ತಿಳಿಸಿದ್ದಾರೆ.
೭ ದಿನದೊಳಗೆ ಕುಮಾರಸ್ವಾಮಿ ಅವರು ಉತ್ತರ ನೀಡಬೇಕು. ಇಲ್ಲವೇ ಖುದ್ದೂ ಮಹಿಳಾ ಆಯೋಗಕ್ಕೆ ಬಂದು ವಿಚಾರಣೆ ಎದುರಿಸಬೇಕು. ತಪ್ಪು ಸಾಬೀತಾದ್ರೆ ಜೈಲು ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.